ವಿಜಯವಾಣಿ ಸುದ್ದಿಜಾಲ ಕೋಲಾರ
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮ ಅ.೭ ರಂದು ನಗರದ ಆರ್.ಜಿ.ಬಡಾವಣೆಯ ವಾಲ್ಮೀಕಿ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಸಂಭ್ರಮ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿAದ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿ, ಜಯಂತಿ ದಿನದಂದು ಎಲ್ಲಾ ಇಲಾಖೆಗಳ ಅಧಿಕಾರಿಗಳು ತಪ್ಪದೆ ಪಾಲ್ಗೊಂಡು ಅದ್ದೂರಿಯಾಗಿ ಆಚರಣೆ ಮಾಡಬೇಕು. ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಇರುವ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿಯAದು ಕೋಲಾರ ನಗರದ ಅಮ್ಮಾವಾರಿ ಪೇಟೆ ರಸ್ತೆ ಮೂಲಕ ವಾಲ್ಮೀಕಿ ಸಮುದಾಯ ಭವನದವರೆಗೆ ಪಲ್ಲಕ್ಕಿ ಮತ್ತು ಸ್ತಬ್ದ ಚಿತ್ರಗಳು ಹಾಗೂ ಜಾನಪದ ಕಲಾ ತಂಡಗಳೊAದಿಗೆ ಬ್ರಹತ್ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಮುದಾಯದ ಸಾಧಕರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಸಮುದಾಯದ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಬೇಕು. ಜೊತೆಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೈಗೊಳ್ಳುವ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಶಾಲಾ ಕಾಲೇಜು ಸರ್ಕಾರಿ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಿ, ನಂತರ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ಸೂಚನಾ ಫಲಕಗಳಲ್ಲಿ ಪ್ರರ್ದಶಿಸಬೇಕು ಎಂದು ಸೂಚಿಸಿದರು.
ವಾಲ್ಮೀಕಿ ಸಮುದಾಯ ಭವನದಲ್ಲಿಯೇ ಜಯಂತಿ ಆಚರಣೆ ಮಾಡಬೇಕು :
ರಂಗಮAದಿರಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಬೇಕೆಂದು ಸಮುದಾಯದ ಕೆಲವು ಮುಖಂಡರು ಒತ್ತಾಯಪಡಿಸಿದರು. ಅದಕ್ಕೆ ಸಮುದಾಯದ ಕೆಲವು ಮುಖಂಡರು ಸಮುದಾಯ ಭವನದಲ್ಲಿಯೇ ಆಚರಣೆ ಮಾಡಬೇಕೆಂದು ಪಟ್ಟು ಹಿಡಿದರು. ಜಿಲ್ಲಾಧಿಕಾರಿಗಳು ಎರಡೂ ಕಡೆಯ ಮುಖಂಡರನ್ನು ಸಮಾಧಾನಪಡಿಸಿ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಪ್ರವೀಣ್ ಪಿ ಭಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳ, ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀನಿವಾಸ್, ಸಮುದಾಯ ಮುಖಂಡರಾದ ವೆಂಕಟರಾಮ್, ನಗರಸಭಾ ಸದಸ್ಯ ಅಂಬರೀಶ್, ನವೀನ್, ವಾಲ್ಮೀಕಿ ಶ್ರೀನಿವಾಸ್, ಕೋಟೆ ಶ್ರೀನಿವಾಸ್, ವಾಲ್ಮೀಕಿ ಮಾದೇಶ್, ಶ್ಯಾಮ್ ನಾಯಕ್, ವಾಲ್ಮೀಕಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಚಿತ್ರ ೨೯ ಕೆ.ಎಲ್.ಆರ್. ೦೬ : ವಾಲ್ಮೀಕಿ ಜಯಂತಿ ಆಚರಣೆಯ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ, ಸಿ.ಇ.ಓ. ಡಾ.ಪ್ರವೀಣ್ ಪಿ.ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳ, ಎಸ್.ಪಿ. ಡಾ.ಬಿ.ನಿಖಿಲ್ ಇದ್ದರು.