ವಿಕಲಚೇತನ ದಿನಾಚರಣೆ 2025ರ ಅಂಗವಾಗಿ ರಾಷ್ಟ್ರಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Application
Published on

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರಿಂದ ಪ್ರತಿ ವರ್ಷದ ಡಿಸೆಂಬರ್ 3ನೇ ದಿನಾಂಕದoದು ಆಚರಿಸಲಾಗುವ ರಾಷ್ಟç ಮಟ್ಟದ “ವಿಶ್ವ ವಿಕಲಚೇತನರ ದಿನಾಚರಣೆ” ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರಕ್ಕೆ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳ ಮತ್ತು ಸಂಸ್ಥೆಗಳಿಗೆ “ರಾಷ್ಟ್ರ ಪ್ರಶಸ್ತಿ” 2025 ನೀಡುವ ಸಂಬoಧ ಅರ್ಜಿಯನ್ನು ಸಲ್ಲಿಸಲು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರ ಜಾಲತಾಣ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ರ್ಪೋರ್ಟಲ್ www.awards.gov.in ಗಳಲ್ಲಿ ಜುಲೈ 31 ಒಳಗಾಗಿ ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821/2490111 ಗೆ ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶಂಕರಗೌಡ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net