

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ಎ 1 ಆರೋಪಿ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.
ನ.6 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ಮುಡಾ ಪ್ರಕರಣ ಸಂಬಂಧ ಈಗಾಗಲೇ ಲೋಕಾಯುಕ್ತ ಪೊಲೀಸರು ಪ್ರಕರಣದ ಎ 2 ಆರೋಪಿ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಎ 3 ಮಲ್ಲಿಕಾರ್ಜುನ ಹಾಗೂ ಎ 4 ದೇವರಾಜು ಅವರ ವಿಚಾರಣೆ ಮುಗಿಸಿದ್ದಾರೆ.
ಸಿದ್ದರಾಮಯ್ಯ ಅವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ 1 ಆರೋಪಿ ಆಗಿರುವ ಸಿದ್ದರಾಮಯ್ಯ ಅವರ ವಿಚಾರಣೆಗೆ ಸಿದ್ದತೆ ಮಾಡಿಕೊಂಡಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನದ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದ್ದಲಿರುವ ಸಿದ್ದರಾಮಯ್ಯ ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದರೆ, ಇದೀಗ ಅವರಿಗೆ ಮುಡಾ ಕಂಟಕ ಎದುರಾಗಿದ್ದು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.