ವಿಜಯ ವಿಠಲ ವಿದ್ಯಾಶಾಲೆಯಲ್ಲಿ ರಾಜ್ಯೋತ್ಸವ

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ರಾಜ್ಯೋತ್ಸವ
5
Published on

ಕನ್ನಡ ನಾಡು, ನುಡಿಯನ್ನು ಉಳಿಸಿ, ಬೆಳೆಸುವ ಕೆಲಸ ಆಗಬೇಕು ಎಂದು ವಿಜಯ ವಿಠಲ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಸತ್ಯಪ್ರಸಾದ್ ಹೇಳಿದರು.

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರೊಂದಿಗೆ ರಾಷ್ಟ್ರ ಧ್ವಜ ಮತ್ತು ನಾಡ ಧ್ವಜವನ್ನು ಹಾರಿಸಿ ಮಾತನಾಡಿದರು.

ಕರ್ನಾಟಕದ ಏಕೀಕರಣ ಒಂದು ಭವ್ಯ ಇತಿಹಾಸ. 1956ನೇ ಇಸವಿಗೂ ವಿಭಿನ್ನ ಆಳ್ವಿಕೆಗೆ ಒಳಪಟ್ಟಿದ್ದ ಕರ್ನಾಟಕದ ಭೂ ಪ್ರದೇಶಗಳು ಒಂದುಗೂಡಿ ವಿಶಾಲ ಕರ್ನಾಟಕವಾದದ್ದು ರೋಮಾಂಚನ ಮೂಡಿಸುತ್ತದೆ. ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದ ಮುಂಬೈ ಪ್ರಾಂತ್ಯ, ಮದ್ರಾಸ್ ಪ್ರಾಂತ್ಯ, ರಾಜಮನೆತನಗಳ ಆಳ್ವಿಕೆಯಲ್ಲಿದ್ದ ಮೈಸೂರು ಪ್ರಾಂತ್ಯ, ನಿಜಾಮರ ಆಳ್ವಿಕೆಯಲ್ಲಿದ್ದ ಹೈದರಾಬಾದ್-ಕರ್ನಾಟಕ ಹಾಗೂ ಕೊಡಗು ಪ್ರಾಂತ್ಯಗಳನ್ನು ಒಳಗೊಂಡ ಏಕೀಕೃತ ಮೈಸೂರು ರಾಜ್ಯ 1956ರಲ್ಲಿ ಉದಯವಾಯಿತು. ಮೈಸೂರು ರಾಜ್ಯವನ್ನು 1973 ನ.1ರಂದು ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು ಎಂದು ಮಾಹಿತಿ ನೀಡಿದರು.

ವಿಜಯ ವಿಠಲ ವಿದ್ಯಾಶಾಲೆಯ ಪ್ರಾಂಶುಪಾಲೆ ಎಸ್.ಎ.ವೀಣಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net