

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟçಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿoಗ್ & ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಮರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ಕುಟುಂಬದ ವಾರ್ಷಿಕ ಆದಾಯ ಗರಿಷ್ಠ, 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಕಿS QS World Ranking 1000 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 25.00 ಲಕ್ಷ ರೂ.ಗಳು ಹಾಗೂ ಪೂರ್ಣ ಕೋರ್ಸ್ ಅವಧಿಗೆ 50.00 ಲಕ್ಷ ರೂ.ಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.
ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವೀಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಸ್ನಾತಕೋತ್ತರ ಕೋರ್ಸ್ಗಳಿಗೆ ವಯೋಮಿತಿ 32, Phd ಕೋರ್ಸ್ ಗಳಿಗೆ ಈ ಯೋಜನೆಗೆ ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಅಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ವೆಬ್‌ಸೈಟ್ http://sevasindhu.karnataka.gov.inಮೂಲಕ ಗ್ರಾಮ್ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcde.karnataka.gov.inಮೂಲಕ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಹಾಗೂ ಮೈಸೂರು ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 0821-2341194 ನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರಾದ ಹೆಚ್.ಎ. ಶೋಭ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.