ವಿದ್ಯಾರ್ಥಿ ವೇತನಕ್ಕಾಗಿ ಪ್ರತಿಭಟನೆ

Published on

ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಶನಿವಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಮಂಜೂರಾತಿಯಲ್ಲಿ ವಿಳಂಬ, ಅವ್ಯವಸ್ಥೆ ಮತ್ತು ಪಿಎಚ್ ಡಿ ಹಾಗೂ ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ಲಾ, ಸದಸ್ಯರಾದ ಷರೀಫ್, ಸೈಯದ್ ಮುಜಮಿಲ್, ಜುನೈಖ್ ಖಾನ್ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net