ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

jobs-759
Portrait of young Latin-American executive wearing glasses sitting at her workplace with computer in office, looking at camera with hand on chin and smiling
Published on


ಬೆಂಗಳೂರು
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2020-21ನೇ ಸಾಲಿಗೆ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಎಐಸಿಟಿಇ ನೀಡುವ ‘ಪ್ರಗತಿ’ ಮತ್ತು ‘ಸಕ್ಷಮ್’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತೆ ಮಾಹಿತಿ ನೀಡಿದೆ.
ಪ್ರಗತಿ ವಿದ್ಯಾರ್ಥಿ ವೇತನ ಯೋಜನೆಗೆ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ.ಮಿತಿ ಒಳಗಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.
ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ.ಮಿತಿ ಒಳಗಿರುವ ಶೇ.40ಕ್ಕಿಂತ ಹೆಚ್ಚು ವಿಶೇಷ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಯೋಜನೆ ಅಡಿ ಅಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 50 ಸಾವಿರ ರೂ.ವರೆಗೆ ನೀಡಲಿದೆ. ಹೆಚ್ಚಿನ ಮಾಹಿತಿಗೆ ಠಿಠಿ://ಠ್ಚಟ್ಝಚ್ಟಜಿ.ಜಟ.ಜ್ಞಿ/ ವೆಬ್‌ಸೈಟ್ ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net