ವಿದ್ಯಾರ್ಥಿಗಳ ಕೌಶಲ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

ಬೆಟ್ಟದಪುರ ಸಮೀಪದ ದೊಡ್ಡಕಮರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಹಾರನಹಳ್ಳಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಹಾಗೂ ಗಣ್ಯರು ಉದ್ಘಾಟಿಸಿದರು. ಚಂದ್ರೇಗೌಡ, ರವೀಂದ್ರ, ಕಲ್ಯಾಣಪ್ಪ, ಸುಂದರೇಗೌಡ, ಗಣೇಶ್, ಕೃಷ್ಣಪ್ಪ, ಕೃಷ್ಣೇಗೌಡ, ಗುರುಮೂರ್ತಿ, ದೇವೇಂದ್ರ, ರಾಮಕೃಷ್ಣ, ಮಲ್ಲಿಕಾರ್ಜುನಪ್ಪ, ಪುಟ್ಟಸ್ವಾಮಿ, ಚಂದ್ರಶೇಖರ್ ಇದ್ದರು.
BTP10Photo2
Published on

ಬೆಟ್ಟದಪುರ: ಕರೊನಾ ಬಳಿಕ ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಅದ್ದೂರಿಯಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗಿದೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಸಂತಸ ವ್ಯಕ್ತಪಡಿಸಿದರು.


ಬೆಟ್ಟದಪುರ ಸಮೀಪದ ದೊಡ್ಡಕಮರಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತಿಚೆಗೆ ಆಯೋಜಿಸಿದ್ದ ಹಾರನಹಳ್ಳಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಶಿಕ್ಷಕನು ತನ್ನ ಸ್ವಂತ ಮಕ್ಕಳಿಗಿಂತ ಹೆಚ್ಚಾಗಿ ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸುತ್ತಾನೆ. ಇದನ್ನು ಅರಿತು ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಶ್ರದ್ಧಾ ಭಕ್ತಿಯಿಂದ ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ವಿದ್ಯೆ ಕಲಿಯಬೇಕು ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಅವರಿಗೆ ಸರಿಯಾದ ವೇದಿಕೆ ಕಲ್ಪಿಸಿ ಕೊಡುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮವಾಗಿದೆ. ಇಂತಹ ಮಹತ್ವದ ಕಾರ್ಯಕ್ರಮವನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಮಕ್ಕಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಶಿಥಿಲ ವ್ಯವಸ್ಥೆಯಲ್ಲಿ ಇರುವ ಕೊಠಡಿಗಳ ಮರುನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸುವುದಾಗಿ ಪ್ರಸನ್ನ ಭರಸವೆ ನೀಡಿದರು.
ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಸುಮಾರು 15 ಶಾಲೆಗಳ ಮಕ್ಕಳು ಭಾಗವಹಿಸಿದ್ದರು. ದೊಡ್ಡಕಮರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರೇಗೌಡ, ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ. ಶಾಲಾ ಸಂಸ್ಥಾಪಕ ಅಧ್ಯಕ್ಷ ಕಲ್ಯಾಣಪ್ಪ. ಮುಖಂಡರಾದ ಸುಂದರೇಗೌಡ, ಗಣೇಶ್, ಕೃಷ್ಣಪ್ಪ, ಕೃಷ್ಣೇಗೌಡ, ಗುರುಮೂರ್ತಿ, ದೇವೇಂದ್ರ, ರಾಮಕೃಷ್ಣ, ಮಲ್ಲಿಕಾರ್ಜುನಪ್ಪ, ಪುಟ್ಟಸ್ವಾಮಿ, ಚಂದ್ರಶೇಖರ್, ಅರುಣ್‌ಕುಮಾರ್, ದೇವರಾಜು, ಸುನೀತಾ, ಟಿ.ಬಿ ನಾಗರತ್ನಾ, ಅಶೋಕ್‌ಕುಮಾರ್, ಬಸವರಾಜ್, ಸಿ.ಪಿ.ಚಂದು, ಶಿವಪುತ್ರ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net