ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆ ಮಾಹಿತಿ ಅಗತ್ಯ

26MDG2 krishi
Published on

ಮೂಡಿಗೆರೆ: ಪಠ್ಯ ಕಲಿಕೆ ಜತೆಗೆ ಕೃಷಿ ಚಟುವಟಿಕೆಯು ಕೃಷಿ ಮತ್ತು ತೋಟಗಾರಿಕಾ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ. ವಿ.ಶ್ರೀನಿವಾಸ್ ಹೇಳಿದರು.

ಲಕ್ಯಾ ಗ್ರಾಪಂನಲ್ಲಿ ಶನಿವಾರ ಏರ್ಪಡಿಸಿದ್ದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ ಅಂತಿಮ ವರ್ಷದ ವಿದ್ಯಾರ್ಥಿಗಳ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಲೆನಾಡು, ಕರಾವಳಿ ಮತ್ತು ಬಯಲು ಸೀಮೆಯಲ್ಲಿ ಕಾಲಕ್ಕನುಗುಣವಾಗಿ ಬೆಳೆಯಬೇಕಾಗಿರುವ ಬೆಳೆಗಳ ವಿಧಾನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಗುತ್ತದೆ. ಇದರಲ್ಲಿ ಯಶಸ್ಸು ಕಂಡ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮುಂದಿನ ಹಂತ ತಲುಪಲಿದ್ದಾರೆ ಎಂದು ತಿಳಿಸಿದರು.

ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮಾಹಿತಿಯನ್ನೊಳಗೊಂಡ ತೋಟಗಾರಿಕಾ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಅಂತಿಮ ವರ್ಷಕ್ಕೆ ವಿದ್ಯಾರ್ಥಿಗಳು ತಲುಪುವಾಗ ಹಲವಾರು ರೀತಿಯ ಕೃಷಿ ಚಟುವಟಿಕೆಗಳನ್ನು ನಡೆಸಿ ಯಶಸ್ವಿಯಾಗುತ್ತಾರೆ ಎಂದರು.

ತೋಟಗಾರಿಕಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಉಮಾ ಮಹೇಶ್ವರಪ್ಪ ಮಾತನಾಡಿ, ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಮಾಹಿತಿ ನೀಡುವ ಸಲುವಾಗಿ ಹಲವಾರು ರೀತಿಯ ಕೃಷಿ ಸಂಬಂಧಿತ ಕಾರ್ಯಕ್ರಮಗಳನ್ನು ಆಗಾಗ ಹಮ್ಮಿಕೊಳ್ಳಲಾಗುತ್ತದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದಾಗ ಬೆಳೆ ಕಾಯ್ದುಕೊಳ್ಳುವ ವಿಧಾನ, ಬಯಲುಸೀಮೆ ಭಾಗದಲ್ಲಿ ವಿವಿಧ ರೀತಿಯ ಬೆಳೆಗಳ ಪರಿಚಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ. ಜತೆಗೆ ರೈತರಿಗೂ ಸಮರ್ಪಕ ಮಾಹಿತಿ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಸಹ ಪ್ರಾಧ್ಯಾಪಕರಾದ ಸೈಯದ್ ಇಮ್ರಾನ್, ಡಾ. ನಮ್ರತಾ, ಜನಪ್ರತಿನಿಧಿಗಳು, ರೈತರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net