ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಿ

5 KDR 2 parisara
ಕಡೂರು ಸಮೀಪದ ಮಂಗಾರಮ್ಮ ದೇವಾಲಯ ಆವರಣದಲ್ಲಿ ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಇರ್ಫಾನ್ ಚಾಲನೆ ನೀಡಿದರು. ಸವಿತಾ ರಾಣಿ, ತಹ ಖಲೀಲ್, ಶರತ್ ಕೃಷ್ಣಮೂರ್ತಿ ಮತ್ತಿತರರಿದ್ದರು.
Published on

ಕಡೂರು: ಆರೋಗ್ಯಯುತ ಬದುಕಿಗೆ ಸ್ವಚ್ಛ ಪರಿಸರ ಅಗತ್ಯ. ಪರಿಸರ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಇರ್ಫಾನ್ ತಿಳಿಸಿದರು.

ಮಂಗಾರಮ್ಮ ದೇವಾಲಯ ಬಳಿ ಜ್ಞಾನಭಾರತಿ ಶಿಕ್ಷಣ ಸಮೂಹ ಸಂಸ್ಥೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯಿಂದ ಏರ್ಪಡಿಸಿದ್ದ ವನಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಡು ನಾಶವಾಗಿ ಪರಿತಪಿಸುವಂತಹ ಪರಿಸ್ಥಿತಿ ನಮ್ಮದಾಗಿದೆ. ಅಭಿವೃದ್ಧಿ ಅತ್ಯಂತ ಅವಶ್ಯಕ. ಅದರ ಜತೆ ಪರಿಸರವೂ ಬಹು ಮುಖ್ಯ. ವಿದ್ಯಾರ್ಥಿಗಳು ಓದಿನ ಜತೆ ಪರಿಸರ ಸಂರಕ್ಷಣೆಯನ್ನೂ ಆದ್ಯತೆಯಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಜ್ಞಾನಭಾರತಿ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶರತ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ಜೀವನ ಆರೋಗ್ಯಕರವಾಗಿ ಸಾಗಲು ಪರಿಸರ ಬಹುಮುಖ್ಯ. ನಮ್ಮ ಒಡನಾಡಿಯಂತೆ ಗಿಡಮರಗಳನ್ನು ಪೋಷಿಸಿದರೆ ಪರಿಸರಕ್ಕೆ ಬಹುದೊಡ್ಡ ಕೊಡುಗೆಯಾಗುತ್ತದೆ. ಸಾಲುಮರದ ತಿಮ್ಮಕ್ಕ ನಮಗೆಲ್ಲ ಆದರ್ಶ. ಈ ನಿಟ್ಟಿನಲ್ಲಿ ಜ್ಞಾನಭಾರತಿ ಶಿಕ್ಷಣ ಸಮೂಹ ಸಂಸ್ಥೆಗಳು ಪರಿಸರ ಸಂರಕ್ಷಣೆಯ ಅರಿವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಲು ಸದಾ ಕ್ರಿಯಾಶೀಲವಾಗಿದೆ ಎಂದರು.

ದೇವಾಲಯದ ಆವರಣದಲ್ಲಿ ವಿವಿಧ ಸಸಿಗಳನ್ನು ನೆಡಲಾಯಿತು. ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಚ್.ಸವಿತಾರಾಣಿ , ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ತಹ ಖಲೀಲ್, ವಲಯ ಅರಣ್ಯಾಧಿಕಾರಿ ಹರೀಶ್, ಮಂಗೇರಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಸುರೇಶ್, ಚಂದ್ರು, ಉಮೇಶ್ ಹಾಗೂ ಶಿಕ್ಷಣ ಸಂಸ್ಥೆಯ ಬೋಧಕವರ್ಗ, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net