ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನ

4
Published on

ಚೈತನ್ಯ ಯೋಗ ಎಜುಕೇಷನ್ ಆ್ಯಂಡ್ ರಿಸರ್ಚ್ ಫೌಂಡೇಷನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಯೋಗ ಒಕ್ಕೂಟದ ಮಾಜಿ ಅಧ್ಯಕ್ಷ ಎಸ್.ವಿ.ವೆಂಕಟೇಶಯ್ಯ ಹಾಗೂ ಅಧ್ಯಕ್ಷ ಕೆ.ಜಿ.ದೇವರಾಜ್ ಅವರಿಗೆ ‘ಯೋಗ ಚೈತನ್ಯ’, ನೇಗಿಲ ಯೋಗಿ ಸಂಸ್ಥೆಯ ಅಧ್ಯಕ್ಷ ಡಿ.ರವಿಕುಮಾರ್ ಅವರಿಗೆ ‘ಶಿಕ್ಷಣ ಚೈತನ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆಯುರ್ವೇದ ತಜ್ಞ ಡಾ.ಎ.ಎಸ್.ಚಂದ್ರಶೇಖರ್ ಮಾತನಾಡಿ, ಯೋಗದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಈ ಸಂಸ್ಥೆ ಮಾಡುತ್ತಿರುವುದು ಸ್ವಾಗತಾರ್ಹ. ಈಗ ಬಿಡುಗಡೆ ಮಾಡಿರುವುದನ್ನು ಕೇವಲ ಕ್ಯಾಲೆಂಡರ್ ಎನ್ನದೇ ಪಂಚಾಂಗ ಎನ್ನಬಹುದಾದ ರೀತಿ ಮಾಹಿತಿಗಳಿವೆ ಎಂದು ಶ್ಲಾಘಿಸಿದರು.

ಇದೇ ವೇಳೆ ಫೌಂಡೇಷನ್ ಹೊರ ತಂದಿರುವ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಯೋಗ ಒಕ್ಕೂಟದ ಕಾರ್ಯಾಧ್ಯಕ್ಷ ಟಿ.ಜಲೇಂದ್ರಕುಮಾರ್, ಹಿರಿಯ ಉಪಾಧ್ಯಕ್ಷ ಎಂ.ಎಸ್.ರಮೇಶ್‌ಕುಮಾರ್, ಡಾ.ಬಿ.ಪಿ. ಮೂರ್ತಿ ಹಾಗೂ ಎನ್. ಅನಂತ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net