

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಮೇದಾರ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಹಾಗೂ ಆದಿವಾಸಿ ಮತ್ತು ಮೇದ ಸಮುದಾಯಗಳ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು 10-09-2025 ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿದಾರರ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ಗ್ರಾಮೀಣ 1.50 ಲಕ್ಷ ಮತ್ತು ನಗರ ಪ್ರದೇಶ 2.50 ಲಕ್ಷಗಳು), ಆಧಾರ್‌ಕಾರ್ಡ್, ಆಹಾರ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಆಯಾಯ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖಾ ಕಚೇರಿಯನ್ನು ಸಂಪರ್ಕಿಸುವoತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.