ವಿವಿಧ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನ

Application
Published on

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ -ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು hhtp//kacdc.karnataka.gov.in  ರ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.

 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವ ಯೋಜನೆಗಳು: ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ , ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ- CET ಹಾಗೂ NEET ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.

 ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಮೋಬೈಲ್ ಸಂಖ್ಯೆಗೆ ಆಧಾರ್ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. 2019-20ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಚೇರಿ ಹಾಗೂ ನಿಗಮದ ಸಹಾಯವಾಣೀ:9448451111, ದೂ.ಸಂ:0821-2341194 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪರಾದ ಹೆಚ್.ಎ.ಶೋಭ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net