

ಮೈಸೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಾದ ಕಸ್ತೂರ ಬಾ ಗಾಂಧಿ ಬಾಲಿಕಾ ವಿದ್ಯಾಲಯ ಟೈಪ್ -1 ಮತ್ತು ಹೆಣ್ಣು ಮಕ್ಕಳ ಹಾಸ್ಟೆಲ್ (ಕೆಜಿಬಿವಿ 4), ನೇತಾಜೀ ಸುಭಾಷ್ ಚಂದ್ರ ಬೋಸ್ ಅವಾಸೀಯಾ ಶಾಲೆ , ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ (ಕೆಕೆಜಿಬಿವಿ) ಶಾಲೆಗಳಲ್ಲಿ 2025-26 ನೇ ಸಾಲಿನ ಪ್ರವೇಶಕ್ಕೆ ಅನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಕೆ.ಜಿ.ಬಿ.ವಿ (ಕಸ್ತೂರ ಬಾ ಗಾಂಧಿ ಬಾಲಿಕಾ ವಿದ್ಯಾಲಯ-ಟೈಪ್ 1): 2025-26 ನೇ ಸಾಲಿನಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಕೆ.ಜಿ.ಬಿ.ವಿ. ವಸತಿ ಶಾಲೆಗಳನ್ನು sಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಉಚಿತ ಪ್ರವೇಶ ನೀಡಲಾಗುತ್ತದೆ. ಶಾಲೆಯಿಂದ ಹೊರಗುಳಿದ ಹೆಣ್ಣು ಮಕ್ಕಳಿಗೆ 6 ರಿಂದ 8ನೇ ತರಗತಿಗೆ ದಾಖಲಾತಿಯನ್ನು ಕೈಗೊಳ್ಳಲಾಗುತ್ತಿದ್ದು, ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ವೃತ್ತಿ ಕೌಶಲ್ಯ ತರಬೇತಿ, ಕರಾಟೆ, ಯೋಗ, ಸಂಗೀತ, ಗ್ರಂಥಾಲಯ, ವಾಚನಾಲಯದ ವ್ಯವಸ್ಥೆಯನ್ನು ವಸತಿ ನಿಲಯಗಳಲ್ಲಿ ಕಲ್ಪಿಸಲಾಗಿರುತ್ತದೆ. ಎಸ್ಸಿ, ಎಸ್ಟಿ, ಓ.ಬಿ.ಸಿ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ 75 ಹಾಗೂ ಬಿ.ಪಿ.ಎಲ್ ಕಾರ್ಡ್ ಹೊಂದಿದವರಿಗೆ ಶೇ 25 ರಂತೆ ದಾಖಲಾತಿ ನೀಡಲಾಗುವುದು. ಮಕ್ಕಳಿಗೆ ಉಚಿತ ಊಟ, ವಸತಿ ಸೌಲಭ್ಯವಿರುತ್ತದೆ. ಪ್ರತಿ ದಿನ ಮೆನು ಚಾರ್ಟ್ ಪ್ರಕಾರ ಊಟ