ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Application
Published on

ಬೋಗಾದಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಮತ್ತು ವಿಕಲಚೇತನರಿಗೆ 2025-26 ನೇ ಸಾಲಿನ ಎಸ್. ಎಫ್. ಸಿ ಮುಕ್ತಾನಿಧಿ ಹಾಗೂ ಪಟ್ಟಣ ಪಂಚಾಯಿತಿ ಅನುದಾನದಲ್ಲಿ ಶೇ.24.10, ಶೇ 7.25, ಮತ್ತು ಶೇ.5 ರ ಯೋಜನೆಯ ಅನುದಾನದಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೇ 24.10, ರ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಡಾ. ಬಿ. ಆರ್. ಅಂಬೇಡ್ಕರ್ ನಿವಾಸ್/ಇತರೆ ವಸತಿ ಯೋಜನೆ ಹಾಗೂ ಸ್ವಂತ ಮನೆ ನಿರ್ಮಿಸುವ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡಲಾಗುವುದು. ಶೇ.24.10 ಯೋಜನೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ಗಣಕಯಂತ್ರ ತರಬೇತಿ ನೀಡಲಾಗುವುದು. ಶೇ.24.10 ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಉನ್ನತ ಶಾಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ಸಹಾಯಧನ ನೀಡಲಾಗುವುದು. ಶೇ.24.10, ಶೇ.7.25 ಮತ್ತು ಶೇ.5 ರ ಯೋಜನೆಯಲ್ಲಿ ಶೇ.24.10 ಯೋಜನೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರು, ವಿಕಲ ಚೇತನರಿಗೆ, 2025-26 ನೇ ಸಾಲಿನಲ್ಲಿ ಎಸ್. ಎಸ್.ಎಲ್. ಸಿ, ಪಿ.ಯು.ಸಿ ಪದವಿ ಸ್ನಾತ್ತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವವರಿಗೆ ಪ್ರೋತ್ಸಾಹಧನ ಹಾಗೂ ತಾಂತ್ರಿಕ/ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಸಂಬAಧಿಸಿದ ದೃಢೀಕೃತ ದಾಖಲೆಗಳೊಡನೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ ಎಂದು ಬೋಗಾದಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net