ವಿಶೇಷ ಮಧ್ಯಸ್ಥಿಕೆ ಅಭಿಯಾನ ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಚರಣೆ:102 ಪ್ರಕರಣ ಇತ್ಯರ್ಥ

Crime_20251018002940411.jpg
Published on

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಶೇಷ ಮಧ್ಯಸ್ಥಿಕೆ ಅಭಿಯಾನ ರಾಷ್ಟçಕ್ಕಾಗಿ 90 ದಿನಗಳ ಅಭಿಯಾನವನ್ನು ಭಾರತದ ಉದ್ದಗಲಕ್ಕೂ ಪ್ರಾರಂಭಿಸಲಾಗಿತ್ತು. ಇದು ಅನುಮೋದಿತ ಪ್ರಮಾಣಿತ ಕಾರ್ಯಚರಣಾ ವಿಧಾನ(ಎಸ್.ಒ.ಪಿ) ನ್ನು ಪಾಲಿಸಿ 1ನೇ ಜುಲೈ 2025 ರಿಂದ 7ನೇ ಅಕ್ಟೋಬರ್ 2025 ರವರೆಗೆ ಜಿಲ್ಲಾ ನ್ಯಾಯಾಲಯಗಳು ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲು 90 ದಿನಗಳ ತೀವ್ರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವಿಶೇಷ ಅಭಿಯಾನದಲ್ಲಿ 102 ಪ್ರಕರಣಗಳು ಇತ್ಯರ್ಥವಾಗಿದ್ದು ಮತ್ತು 1738 ಪ್ರಕರಣಗಳು ಇತ್ಯರ್ಥವಾಗಿರುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಮರ್ನಾಥ್ ಕೆ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net