ವೀರಶೈವ-ಲಿಂಗಾಯತ ಜನಪ್ರತಿನಿಧಿಗಳಿಗೆ 5ರಂದು ಸನ್ಮಾನ

02 NATARAJA SWAMIJI-6
ನಟರಾಜ ಸ್ವಾಮೀಜಿ
Published on

ಕೆ.ಆರ್.ನಗರ: ವೀರಶೈವ-ಲಿಂಗಾಯತ ಸಮುದಾಯದ ನೂತನ ಶಾಸಕರು ಮತ್ತು ಮಂತ್ರಿಗಳನ್ನು ವೀರಶೈವ-ಲಿಂಗಾಯತ ಸಂಘಟನೆ ವೇದಿಕೆ ವತಿಯಿಂದ ಸನ್ಮಾನಿಸುವ ಕಾರ್ಯವನ್ನು ಜು.5ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗಾವಡಗೆರೆ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ ತಿಳಿಸಿದರು.

ಸಮುದಾಯ ಮತ್ತು ಸಮಾಜಕ್ಕೆ ಘನತೆ ತರುವ ದೃಷ್ಟಿಯಿಂದ ಕೆಲಸ ಮಾಡಲಿ ಎಂಬ ಉದ್ದೇಶದಿಂದ ಚುನಾಯಿತ ಜನಪ್ರತಿನಿಧಿಗಳನ್ನು ಸನ್ಮಾನಿಸಲಾಗುತ್ತಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ. ಸೊಲ್ಲಾಪೂರ ಗೌಡಗಾಂವ ಹಿರೇಮಠದ ಡಾ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಎಡೆಯೂರು, ಮುಕ್ತಿಮಂದಿರ, ಹುಕ್ಕೇರಿ, ಸಿದ್ಧರಬೆಟ್ಟ ಸೇರಿದಂತೆ ವಿವಿಧ ಮಠಗಳ ಶ್ರೀಗಳು ನೇತೃತ್ವ ವಹಿಸಲಿದ್ದಾರೆ ಎಂದುರು.

ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ಸಮಾರಂಭ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ತೆಲಂಗಾಣ ರಾಜ್ಯದ ಸಂಸದ ಬಿ.ಬಿ.ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಪ್ರದೀಪ ಕಂಕಣವಾಡಿ, ಸಚಿವರಾದ ಎಂ.ಬಿ.ಪಾಟೀಲ, ಶರಣಪ್ರಕಾಶ ಪಾಟೀಲ, ಈಶ್ವರ ಖಂಡ್ರೆ, ಮಲ್ಲಿಕಾರ್ಜುನ, ಶಿವಾನಂದ ಪಾಟೀಲ, ಲಕ್ಷ್ಮೀ ಹೆಬ್ಬಾಳಕರ ಹಾಗೂ ಶರಣಬಸಪ್ಪ ದರ್ಶನಾಪೂರ ಇತರರು ಭಾಗವಹಿಸಲಿದ್ದಾರೆ. ಆದ್ದರಿಂದ ಜಿಲ್ಲಿಯಿಂದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.

ವೇದಿಕೆ ರಾಜ್ಯ ಕಾರ್ಯದರ್ಶಿ ರೇಖಾರವೀಂದ್ರ, ಜಿಲ್ಲಾಧ್ಯಕ್ಷೆ ಪಂಕಜಾ ಬಸವರಾಜು, ಸಂಘಟನಾ ಕಾರ್ಯದರ್ಶಿ ಕುಸುಮಾ ಮಹೇಶ್, ಉಪಾಧ್ಯಕ್ಷೆ ಭಾರತಿ ಶಿವಕುಮಾರ್, ತಾಲೂಕು ಅಧ್ಯಕ್ಷ ಕೆ.ಎಸ್.ರಾಜು, ಕರುಣಾಕರ, ಕೆ.ಪಿ.ರವೀಂದ್ರ, ಲತಾ ಸುಭಾಷ್, ಜಮುನಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net