ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಕಾರ್ಯಕ್ರಮ

IAS
Published on

ಮೈಸೂರು ವಿಶ್ವ ವಿದ್ಯಾನಿಲಯ ನೇಗಿಲಯೋಗಿ ವಿದ್ಯಾವರ್ಧಕ ಸ್ಪರ್ಧಾ ಕೇಂದ್ರದ ವತಿಯಿಂದ ಮೇ 6 ರಂದು ಬೆಳಗ್ಗೆ 11.30 ಗಂಟೆಗೆ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು(ಸ್ವಾಯತ್ತ), ಜೆ.ಎಲ್.ಬಿ ರಸ್ತೆ, ಮೈಸೂರು ಇಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೈಸೂರು ನಗರದ ಸೈಬರ್ ಕ್ರೈಂನ ಸಹಾಯಕ ಪೊಲೀಸ್ ಆಯುಕ್ತರಾದ ಸ್ನೇಹರಾಜ್ ಅವರು ಉದ್ಘಾಟನೆ ಮಾಡಲಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಚಂದ್ರಶೇಖರ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ (ಸ್ವಾಯತ್ತ), ಪ್ರಾಂಶುಪಾಲರಾದ ಪ್ರೊ. ಅಬ್ದುಲ್ ರಹಿಮನ್. ಎಂ, ಮೈಸೂರು ವಿಶ್ವ ವಿದ್ಯಾನಿಲಯದ, ನೇಗಿಲಯೋಗಿ ವಿದ್ಯಾವರ್ಧಕ ಸ್ಪರ್ಧಾಕೇಂದ್ರದ ಸಂಯೋಜಕರಾದ ಡಾ. ಎಂ. ಬಿ.ಸುರೇಶ್ ಹಾಗೂ ಗೌರವ ಸಲಹೆಗಾರರಾದ ಡಿ.ರವಿಕುಮಾರ್ ಅವರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net