

ಆಯನೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ತಂತ್ರಜ್ಞಾನಕ್ಕೆ ಮಹತ್ವ ನೀಡಲಾಗುತ್ತಿದೆ ಎಂದು ಆಯನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಡಾ. ಎ.ಗಣೇಶ್ ಭಟ್ ತಿಳಿಸಿದರು.
ಕಾಲೇಜು ಆವರಣದಲ್ಲಿ ಉದ್ಯೋಗ ಭರವಸೆ ಕೋಶ, ಪ್ರೇರಣ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಸೋಮವಾರ ಉದ್ಯೋಗ ಅವಕಾಶಗಳು ಹಾಗೂ ಸ್ಪರ್ಧಾತ್ಮಕ ಜಗತ್ತು ವಿಷಯವಾಗಿ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪದವಿ ಶಿಕ್ಷಣದೊಂದಿಗೆ ವೃತ್ತಿಪರ ಕೌಶಲ ಹೆಚ್ಚಿಸಿಕೊಳ್ಳುವ ಮೂಲಕ ಆಧುನಿಕ ಯುಗದ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದರು.
ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆ ತರಬೇತುದಾರ ವಿನಯ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಜತೆಗೆ ಉದ್ಯೋಗ ಹುಡುಕುವ ನೆಟ್‌ವರ್ಕಿಂಗ್ ಹಾಗೂ ವೃತ್ತಿ ಕೌಶಲದ ಬಗ್ಗೆ ಪ್ರಾಯೋಗಿಕ ಸಲಹೆ ನೀಡಿದರು. ಪ್ರಮುಖರಾದ ಮಹಾದೇವ, ಶಿಲ್ಪಾ ಪಾಟೀಲ್ ಇತರರಿದ್ದರು.