ಶಾಂತಿಭಂಗ ಉಂಟು ಮಾಡುವವರ ವಿರುದ್ಧ ಕ್ರಮ ವಹಿಸಿ

HUN-SEP-2-3(IG VISIT TO HUNSUR)
ಹುಣಸೂರು ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅಧೀನ ಅಧಿಕಾರಿಗಳನ್ನು ಪರಿಚಯಿಸಿಕೊಂಡು ಮಾಹಿತಿ ಪಡೆದರು. ಎಸ್‌ಪಿ ಆರ್.ಚೇತನ್, ಎಎಸ್‌ಪಿ ನಂದಿನಿ ಇದ್ದರು.
Published on

ಹುಣಸೂರು ನಗರ, ಗ್ರಾಮಾಂತರ, ಬಿಳಿಕೆರೆ, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ತಾಲೂಕುಗಳ ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳೊಂದಿಗೆ ಸಭೆ


ಹುಣಸೂರು: ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಶುಕ್ರವಾರ ಪರಿಶೀಲನೆ ನಡೆಸಿದರು.


ಇಲ್ಲಿನ ಡಿವೈಎಸ್‌ಪಿ ಕಚೇರಿಯಲ್ಲಿ ಅಧೀನ ಸಿಬ್ಬಂದಿಯಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಹುಣಸೂರು ನಗರ, ಗ್ರಾಮಾಂತರ, ಬಿಳಿಕೆರೆ, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ತಾಲೂಕುಗಳ ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳೊಂದಿಗೆ ಸಭೆ ನಡೆಸಿದರು. ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮವಹಿಸಲು ಸೂಚಿಸಿದರು. ಶಾಂತಿಭಂಗ ಉಂಟು ಮಾಡಬಹುದಾದ ಕಿಡಿಗೇಡಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್, ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ರವಿಪ್ರಸಾದ್ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net