ಶಾಲಾ ಮಕ್ಕಳಿಗೆ ಮೂಲಸೌಕರ್ಯ ಕಲ್ಪಿಸುವ ಗುರಿ

HUN-AUG-17-3(ROTARY PROGRAMME)
Published on

ಹುಣಸೂರು: ಹುಣಸೂರು ರೋಟರಿ ಸಂಸ್ಥೆಯ ವತಿಯಿಂದ ನಗರದ ಪೊಲೀಸ್ ಠಾಣೆ ಹಿಂಭಾಗವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 50ಕ್ಕೂ ಹಚ್ಚು ಮಕ್ಕಳಿಗೆ ಲಂಚ್‌ಬ್ಯಾಗ್ ಕಿಟ್ ವಿತರಿಸಲಾಯಿತು.


ಈ ವೇಳೆ ಮಾತನಾಡಿದ ಹುಣಸೂರು ರೋಟರಿ ಸಂಸ್ಥೆಯ ಚೇರ್ಮನ್ ಗಿರೀಶ್, ರೋಟರಿ ಸಂಸ್ಥೆ ಸಾಕ್ಷರತೆ ಕುರಿತಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಯೋಜನೆಯನ್ನು ಜಿಲ್ಲಾ ಯೋಜನೆಯಾಗಿ ಕೈಗೆತ್ತಿಕೊಳ್ಳಲಾಗಿದೆ. ಅದರ ಜೊತೆಗೆ ಹುಣಸೂರು ತಾಲೂಕಿನಲ್ಲಿ ಮಕ್ಕಳಿಗೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಒಂದೂವರೆ ಶತಮಾನಗಳ ಇತಿಹಾಸ ಹೊಂದಿರುವ ಈ ಶಾಲೆ ಇದೀಗ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗಾಗಿ ಲಂಚ್ ಬ್ಯಾಗ್ ವಿತರಿಸಲಾಗುತ್ತಿದೆ ಎಂದರು.


ರೋಟರಿ ಅಧ್ಯಕ್ಷ ರೊ.ಚನ್ನಕೇಶವ ಮಾತನಾಡಿ, ರೋಟರಿ ಸಂಸ್ಥೆಯ ಸದಸ್ಯರು ತಮ್ಮ ವೈಯಕ್ತಿಕ ಹಣವನ್ನು ಭರಿಸಿ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದು, ನಮ್ಮ ಕ್ಲಬ್‌ನ ಹಿರಿಯ ಸದಸ್ಯ ಗಿರೀಶ್ ಅವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ ಲಂಚ್‌ಬ್ಯಾಗ್ ಕಿಟ್ ವಿತರಿಸಲಾಗಿದೆ ಎಂದರು. ಮುಖ್ಯ ಶಿಕ್ಷಕ ಡಾ.ಮಾದುಪ್ರಸಾದ್ ರೋಟರಿ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.


ರೋಟರಿ ಕಾರ್ಯದರ್ಶಿ ಪ್ರಸನ್ನಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net