

ಹೊಳೆನರಸೀಪುರ: ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಕೃಷ್ಣ ಅವರು ನುಡಿದರು.
ಇತ್ತೀಚೆಗೆ ಜರುಗಿದ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿರುವ ಗ್ರೀನ್ ವುಡ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳುವುದು ಒಳ್ಳೆಯ ಬೆಳವಣಿಯಾಗಿದೆ. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್ ,ಟಿವಿ, ಗೆ ಅಂಟಿಕೊಂಡಿರುತ್ತಾರೆ ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ ಆದರೆ ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳಬೇಕು ಎಂದರು.
ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದರಿಂದ ಬುದ್ಧಿಶಕ್ತಿ ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಮನರಂಜನೆಗಳಲ್ಲಿ ಭಾಗವಹಿಸುವುದರಿಂದ ನಷ್ಟವಾಗುವುದಿಲ್ಲ ಇದಕ್ಕೆ ಪೋಷಕರ ಸಹಮತವೂ ಇರಬೇಕಿದೆ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕಿ ಹೆಚ್ ಆರ್ ಮಂಜುಳಾ ರಮೇಶ್ ಅವರು ವೇದಿಕೆಯ ಮೇಲೆ ಶಾಲಾ ವರದಿಯನ್ನು ತಿಳಿಸಿದರು. ಹಲವು ಕ್ರೀಡೆಗಳಲ್ಲಿ ಭಾಗವಹಿಸಿ ತಾಲೂಕು ಜಿಲ್ಲಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಯಿತು. ದೈಹಿಕ ಶಿಕ್ಷಕ ಕೆಂಪೇಗೌಡ ಅವರು ಕ್ರೀಡಾ ವರದಿ ಓದುವುದರ ಮೂಲಕ ವಿದ್ಯಾರ್ಥಿಗಳಿಗೆ ಪೋಷಕರಿಗೆ ಉತ್ಸಾಹ ಮೂಡಿಸಿದರು. ಸಮಾಜ ಸೇವಕ ಕರ್ನಾಟಕ ರತ್ನ ಪ್ರಶಸ್ತಿ ವಿಜೇತ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ವೇದಿಕೆಯ ಮೇಲೆ ಅವರ ಭಾವಚಿತ್ರವಿರಿಸಿ ನೆರದಿದ್ದ ಪೋಷಕರು ವಿದ್ಯಾರ್ಥಿಗಳು ಮೊಬೈಲ್ ಹಾಗೂ ಮೇಣದಬತ್ತಿ ಬೆಳಕು ಚೆಲ್ಲುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರ್ಷಾದ್ ಉಲ್ಲಾಬೇಗ್ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ, ಸಂಸ್ಥಾಪಕಿ ನೂರ್ ಫಾತಿಮಾ ಸಿಆರ್‌ಪಿ ಪುಟ್ಟಣ್ಣಯ್ಯ ಶಾಲಾ ಸಿಬ್ಬಂದಿ ವರ್ಗ ಇದ್ದರು.
ಬಳಿಕ ಶಾಲಾ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಮೂಡಿಬಂದವು.