ಶಾಲೆ ಅಭಿವೃದ್ಧಿಗೆ 17 ಲಕ್ಷ ರೂ. ಅನುದಾನ

6ldh2 school
ಲಿಂಗದಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ವಾರ್ಷಿಕೋತ್ಸವವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ಎನ್.ಲಿಂಗರಾಜು ಉದ್ಘಾಟಿಸಿದರು. ರತ್ನಮ್ಮ, ಜೆ.ಎಂ ಸೋಮಶೇಖರಯ್ಯ, ಬಿ.ಸಿ.ಚಂದ್ರಶೇಖರ್, ರಚನಾ ಶ್ರೀನಿವಾಸ್ ಇತರರಿದ್ದರು.
Published on

ಲಿಂಗದಹಳ್ಳಿ: ಇಲ್ಲಿನ ಪ್ರೌಢಶಾಲೆಯ ಅಭಿವೃದ್ಧಿಗಾಗಿ 17 ಲಕ್ಷ ರೂ. ಅನುದಾನ ನೀಡಲಾಗಿದ್ದು ಶಾಲೆಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಲಿಂಗದಹಳ್ಳಿ ಹೋಬಳಿಗೆ ತಮ್ಮ ಅವಧಿಯಲ್ಲಿ ಅನೇಕ ಕಾಂಕ್ರಿಟ್ ರಸ್ತೆ, ಸೇತುವೆಗಳ ನಿರ್ಮಾಣ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಮುಂದಿನ ದಿನಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕ ಜೆ.ಎಂ.ಸೋಮಶೇಖರಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಸಮಾಜ ಸೇವಕಿ ರಚನಾ ಶ್ರೀನಿವಾಸ್, ಪದವಿ ಪೂರ್ವ ಕಾಲೇಜಿನ ಉಪನಿರ್ದೇಶಕ ಪುಟ್ಟನಾಯ್ಕ, ಲಿಂಗದಹಳ್ಳಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ನಿವೃತ್ತ ಮುಖ್ಯಶಿಕ್ಷಕರಾದ ಜಯಸೋಮನಾಥಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಬಿ.ಸಿ. ಚಂದ್ರಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ಎನ್.ಲಿಂಗರಾಜು, ಲಿಂಗದಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ. ಜಯಪ್ಪ, ನಿವೃತ್ತ ಪ್ರಾಚಾರ್ಯ ಚಂದ್ರಶೇಖರ್ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net