ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳು ಸಿದ್ಧ

India-fails-to-educate-its-school-children1
Published on


ಬೆಂಗಳೂರು
ಕೇಂದ್ರ ಸರ್ಕಾರ ಶಾಲಾ-ಕಾಲೇಜು ಆರಂಭ ವಿಚಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿರುವ ಕಾರಣ ಶಾಲೆಗಳು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶಾಲೆಗಳನ್ನು ತೆರೆಯಲು ಸಿದ್ಧತೆ ನಡೆಸಿದ್ದಾರೆ.
ಈ ಹಿಂದೆಯೇ ಕೇಂದ್ರ ಸರ್ಕಾರ ಸೆ.21ರಿಂದ ಶಾಲೆಗಳಿಗೆ ಮಕ್ಕಳು ಬಂದು ಮಾರ್ಗದರ್ಶನ ಪಡೆದುಕೊಳ್ಳಲು ಅವಕಾಶ ಕಲ್ಪಿಸುವಂತೆ ತಿಳಿಸಿತ್ತು. ಆ ವೇಳೆಗೆ ಶಾಲೆ ತೆರೆಯಲು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸುರಕ್ಷತಾ ಉಪಕರಣಗಳು ಮತ್ತು ಉತ್ಪನ್ನಗಳನ್ನು ಖರೀದಿ ಮಾಡಿತ್ತು. ಆದರೆ, ಕೊನೆ ಕ್ಷಣದಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸುವ ಮೂಲಕ ಸೆಪ್ಟಂಬರ್ ಅಂತ್ಯದವರೆಗೆ ಶಾಲೆ ತೆರೆಯುವುದಿಲ್ಲವೆಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಸರ್ಕಾರದ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿದ್ದು, ಶಾಲೆಗಳು ತೆರೆಯಲಿಲ್ಲ. ಆದರೆ, ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆ ಅಡಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಸಿ ಬೋಧನೆ ಮಾಡುತ್ತಿದ್ದು, ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮಾತ್ರ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಈ ರೀತಿ ಇರುವಾಗ ಖಾಸಗಿ ಶಾಲೆಗಳನ್ನು ಆರಂಭಿಸಿ ಶಾಲೆಗಳಲ್ಲೇ ಸುರಕ್ಷತಾ ಕ್ರಮ ಅನುಸರಿಸಿ ತರಗತಿ ನಡೆಸುವುದರಲ್ಲೇನು ತಪ್ಪು ಎಂಬುದು ರಾಜ್ಯದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪ್ರಶ್ನೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net