ಶಾಲೆಯಲ್ಲಿ ಕೊಡುವ ಮೊಟ್ಟೆಯಿಂದ ಮಕ್ಕಳು ವಂಚಿತರಾಗದAತೆ ಕ್ರಮ ವಹಿಸಿ / ಸಿ.ಇ.ಓ. ಡಾ. ಪ್ರವೀಣ್. ಪಿ ಬಾಗೇವಾಡಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲೆಯಲ್ಲಿ ಶಾಲಾ ಮಕ್ಕಳು ಮೊಟ್ಟೆಯಿಂದ ಸಿಗುವ ಪೌಷ್ಟಿಕಾಂಶಗಳಿAದ ವಂಚಿತರಾಗದAತೆ ಕ್ರಮವಹಿಸಿ ಎಂದು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಡಾ.ಪ್ರವೀಣ್. ಪಿ.ಬಾಗೇವಾಡಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಇಂತಹ ಯೋಜನೆಯು ಎಲ್ಲಾ ಶಾಲಾ ಮಕ್ಕಳಿಗೆ ತಲುಪುವ ರೀತಿ ಕಾರ್ಯನಿರ್ವಹಿಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಮೊಟ್ಟೆಯಲ್ಲಿ ಸಿಗುವ ಪೌಷ್ಟಿಕಾಂಶಗಳು :

ಮೊಟ್ಟೆ ನೀಡುವ ಮುಖ್ಯ ಉದ್ದೇಶವೆಂದರೆ ಮೊಟ್ಟೆಯಲ್ಲಿ ಂ ಜೀವಸತ್ವವಿರುತ್ತದೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿ. ಉತ್ತಮ ಕೊಬ್ಬನ್ನು ಹೊಂದಿದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಿಟಮಿನ್ ಎ ಇರುತ್ತದೆ. ಬಲವಾದ ಮೂಳೆ ಬೆಳವಣಿಗೆಗೆ ಸಹಕಾರಿ, ಕಣ್ಣಿನ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಒಂದು ಮೊಟ್ಟೆಯಲ್ಲಿ ೬.೩ ಗ್ರಾಂ ಪ್ರೋಟೀನ್ ಇರುತ್ತದೆ. ೯ ಉಪಯುಕ್ತ ಅಮಿನೋ ಆಮ್ಲಗಳಿರುತ್ತವೆ. ಇಂತಹ ಉತ್ತಮ ಪೌಷ್ಟಿಕಾಂಶಗಳನ್ನು ಪಡೆದುಕೊಂಡು ಮಕ್ಕಳು ದೈಹಿಕ ಬೆಳವಣಿಗೆ ಹಾಗೂ ಉತ್ತಮ ವಿದ್ಯಾಭ್ಯಾಸವನ್ನು ಪಡೆಯುವುದು ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲೆಯು ಗಡಿಭಾಗದಲ್ಲಿ ಇರುವುದರಿಂದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಶಾಲೆಗಳಿಗೆ ಆಗಾಗ್ಗೆ ಭೇಟಿ ನೀಡಿ ಮೊಟ್ಟೆ ಉತ್ತಮ ಪೋಷಕಾಂಶಗಳನ್ನು ಹೊಂದಿದೆ ಎಂದು ಅಲ್ಲಿನ ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಅರಿವು ಮೂಡಿಸಬೇಕು. ಆ ಮೂಲಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯ ಲಾಭ ಎಲ್ಲಾ ಮಕ್ಕಳಿಗೆ ತಲುಪಬೇಕು ಎಂದು ಹೇಳಿದರು.

ಶಾಲೆಗಳಲ್ಲಿ ಸ್ವಚ್ಛತೆ, ದಾಖಲಾತಿ ಬಗ್ಗೆ ಅರಿವು ಮೂಡಿಸಿ :

ಗ್ರಾಮಗಳಲ್ಲಿ ಗ್ರಾಮ ಸಭೆ ನಡೆಯುವ ಸಂದರ್ಭದಲ್ಲಿ ಶಾಲಾ ಮಕ್ಕಳ ದಾಖಲಾತಿಯ ಬಗ್ಗೆ ಅರಿವು ಮೂಡಿಸಬೇಕು. ಶಾಲಾ ಕಟ್ಟಡಗಳು ಶಿಥಿಲಗೊಂಡಿದ್ದರೆ ತಮ್ಮ ಗಮನಕ್ಕೆ ತರಬೇಕು. ಶಾಲೆಗಳನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು. ಸಿಎಸ್‌ಆರ್ ಅನುದಾನದಲ್ಲಿ ಶಾಲೆಯ ಕಟ್ಟಡಗಳ ಕಾಮಗಾರಿಗಳನ್ನು ನಡೆಸಬೇಕಾದರೆ ನನ್ನ ಗಮನಕ್ಕೆ ತರಬೇಕು ಎಂದರು.

ಗ್ರಾಮ ಪಂಚಾಯತಿ ಮಟ್ಟದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಂಥಾಲಯಗಳು ಇದ್ದು, ಈ ಬಗ್ಗೆ ಶಾಲಾ ಮಕ್ಕಳಿಗೆ ಗ್ರಂಥಾಲಯಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಕೈತೋಟ ಬಗ್ಗೆ ಅರಿವು :

ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳಲ್ಲಿ ಔಷದೀಯ ಸಸಿಗಳನ್ನು ಬೆಳೆಸಲು ಮಾರ್ಗಸೂಚಿ ನೀಡಿದರು. ಎಲ್ಲಾ ಶಾಲೆಗಳಲ್ಲೂ ಕೈತೋಟ ಮಾಡಲು ವ್ಯವಸ್ಥೆ ಇದಿಯಾ ಎಂಬುದರ ಬಗ್ಗೆ ಚರ್ಚಿಸಿದರಲ್ಲದೆ ತಮ್ಮ-ತಮ್ಮ ಶಾಲಾ ಆವರಣಗಳಲ್ಲಿ ಆಯುಷ್ ಇಲಾಖೆಗೆ ಸಂಬAಧಪಟ್ಟ ಔಷಧಿ ಸಸಿಗಳನ್ನು ನೀಡಲು ಸಂಬAಧಪಟ್ಟ ಇಲಾಖೆಗಳು ತಮ್ಮ ತಮ್ಮ ತಾಲೂಕು ಮಟ್ಟದಲ್ಲಿ ಸಭೆಯನ್ನು ನಡೆಸಿ ಸೂಕ್ತ ಮಾರ್ಗದರ್ಶನದೊಂದಿಗೆ ಸಸಿಗಳನ್ನು ಬೆಳೆಸಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪನಿರ್ದೇಶಕರಾದ ನಾರಾಯಣಸ್ವಾಮಿ, ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಕುಮಾರಸ್ವಾಮಿ, ಆಯುಷ್ಮಾನ್ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ ಶೆಟ್ಟಿಗಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೧೮ ಕೆ.ಎಲ್.ಆರ್. ೦೨ : ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸಿಇಓ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ. ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ರಮೇಶ್, ಸಿಡಿಪಿಓ ನಾರಾಯಣಸ್ವಾಮಿ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net