ಯಾದಗಿರಿ: ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವೆಂಕಟರಡ್ಡಿ ಮುದ್ನಾಳ್ ಬುಧವಾರ ತಮ್ಮ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಯಾದಗಿರಿ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದರು.
ಬೆಳಗ್ಗೆಯಿಂದಲೇ ಮತಕ್ಷೇತ್ರದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನತೆ ಮುದ್ನಾಳ್ ಕಚೇರಿಗೆ ಆಗಮಿಸಿದರು. ಇಲ್ಲಿನ ತಹಸೀಲ್ ಕಚೇರಿಯಲ್ಲಿ ವಿಧಾನ ಪರಿಷತ್ ಮಾಜಿ ಸ್ಪೀಕರ್ ರಘುನಾಥರಾವ್ ಮಲ್ಕಾಪುರೆ ಜತೆಗೂಡಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಡನೆ ಮಾತನಾಡಿ, ನಾನು ಯಾರನ್ನೂ ನಾಮಪತ್ರ ಸಲ್ಲಿಕೆ ವೇಳೆ ಬನ್ನಿ ಎಂದು ಕರೆದಿಲ್ಲ. ಜನತೆ ನಮ್ಮ ಮೇಲೆ ಅಭಿಮಾನವಿಟ್ಟು ಬಂದಿದ್ದು, ಈ ಬಾರಿಯೂ ಸಹ ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.