ಶಾಸಕ ಯಶ್‌ಪಾಲ್ ಸುವರ್ಣ ಹೇಳಿಕೆಗೆ ಖಂಡನೆ

Published on

ಹುಣಸೂರು: ಉಡುಪಿಯ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ರಾಜ್ಯದ ಗೃಹಮಂತ್ರಿ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ದಲಿತ ಮುಖಂಡ ಬಿಳಿಕೆರೆ ರಾಜು ಖಂಡಿಸಿದ್ದಾರೆ.


ಘಟನೆ ಕುರಿತಂತೆ ಗೃಹಮಂತ್ರಿಗಳ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಶಾಸಕ ಸುವರ್ಣ ಗೃಹಮಂತ್ರಿಗಳ ಕುಟುಂಬವನ್ನು ಎಳೆದು ತಂದಿರುವುದು ಸರಿಯಲ್ಲ. ರಾಜಕೀಯವಾಗಿ ಟೀಕಿಸಲು ಅವಕಾಶವಿದ್ದರೂ ವೈಯಕ್ತಿಕ ನೆಲೆಗಟ್ಟಿನಲ್ಲಿ ಟೀಕಿಸಿರುವುದು ದಲಿತರ ಮನಸ್ಸಿಗೆ ನೋವಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ವಕೀಲ ಮಾರನಹಳ್ಳಿ ಮಧುಕುಮಾರ್ ಮಾತನಾಡಿ, ಶಾಸಕ ಯಶ್‌ಪಾಲ್ ಸುವರ್ಣ ತಮ್ಮ ಹೇಳಿಕೆಯನ್ನು ಹಿಂಪಡೆದು ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಲಿತ ಸಂಘಟನೆಗಳು ಒಡಗೂಡಿ ಬೀದಿಗಿಳಿದು ಹೋರಾಟ ನಡೆಸಬೇಕಾದೀತು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net