ಶಿಕ್ಷಕರ ದಿನಾಚರಣೆ-೧೮ ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ೫ ಕೋಟಿ ವೆಚ್ಚದ ಗುರುಭವನ ನಿರ್ಮಾಣ/ಕೊತ್ತೂರು ಮಂಜುನಾಥ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ನಗರದಲ್ಲಿ ಐದು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಗುರುಭವನವನ್ನು ೨೦೨೬ ರೊಳಗೆ ನಿರ್ಮಿಸಿ ಶಿಕ್ಷಕರಿಗೆ ಹಸ್ತಾಂತರ ಮಾಡುವುದಾಗಿ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಘೋಷಿಸಿದರು.

ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗಳಿಸಿದ ಹಾಗೂ ನಿವೃತ್ತರಾದ ಶಿಕ್ಷರ‍್ನು ಸನ್ಮಾನಿಸಿ ಮಾತನಾಡಿದರು.

ಶಿಕ್ಷಕ ಸಂಘಟನೆಗಳಲ್ಲಿನ ಗೊಂದಲ ಮತ್ತಿತರ ಕಾರಣಗಳಿಂದ ಈವರೆಗೂ ೭ ಬಾರಿ ಶಂಕುಸ್ಥಾಪನೆಗೊAಡಿರುವ ಗುರುಭವನದ ಕಾಮಗಾರಿ ಆರಂಭಗೊಳ್ಳದಿರುವುದು ವಿಷಾದನೀಯ. ಒಂದೇ ವರ್ಷದಲ್ಲಿ ಇಡೀ ಕಟ್ಟಡದ ಕಾಮಗಾರಿ ಪೂರ್ಣ ಅಸಾಧ್ಯವಾದರೂ ಅತಿ ಶೀಘ್ರ ಶಿಲಾನ್ಯಾಸ ನೆರವೇರರಿಸಿ ೨೦೨೬ರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅದೇ ಕಟ್ಟಡದಲ್ಲಿ ನಡೆಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಸಂಸದ ಮುನಿಸ್ವಾಮಿ, ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ತಲಾ ೫೦ ಲಕ್ಷ ನೀಡಿದ್ದಾರೆ, ಉಳಿದಂತೆ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಅನಿಲ್ ಕುಮಾರ್ ಇಬ್ಬರೂ ತಲಾ ೨೫ ಲಕ್ಷ ನೀಡಬೇಕು ಎಂದ ಅವರು, ಶಿಕ್ಷಕರ ಕಲ್ಯಾಣ ನಿಧಿಯ ೧ ಕೋಟಿ ರೂ ಸೇರಿದಂತೆ ಎಲ್ಲಾ ಹಣ ಬಳಸಿಕೊಂಡು ಕಟ್ಟಡ ಕಾಮಗಾರಿ ಶೀಘ್ರ ಆರಂಭಿಸುವುದಾಗಿ ತಿಳಿಸಿದರು.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ತಂದೆ, ತಾಯಿ, ಶಿಕ್ಷಕ ಮಾತ್ರ ಪ್ರತಿಯೊಬ್ಬರ ಮನಸ್ಸಿನಲ್ಲೂ ಚಿರಸ್ಥಾಯಿಯಾಗಿ ಉಳಿಯಲು ಸಾಧ್ಯ. ಶಿಕ್ಷಕರು ಸಂಘಟನೆ ರಚನೆಗೆ ಚುನಾವಣೆಗೆ ಹೋಗದೇ ಅವಿರೋಧ ಆಯ್ಕೆಗೆ ಅವಕಾಶ ಮಾಡಿಕೊಡಿ, ವಿರಸ, ಗೊಂದಲ ಬೇಡ ಎಲ್ಲರೂ ಒಗ್ಗಟ್ಟಾಗಿ ಸಾಗಿ ಎಂದರು.

ವಿಧಾನಪರಿಷತ್ ಸದಸ್ಯ ಎಂ.ಎಲ್ ಅನಿಲ್‌ಕುಮಾರ್ ಮಾತನಾಡಿ, ಪ್ರಾಥಮಿಕ ಶಿಕ್ಷಣ ಜೀವನದ ಅಡಿಪಾಯವಾಗಿದ್ದು, ಸಮಾಜ ಕಟ್ಟುವ ಶಿಲ್ಪಿಗಳಾದ ಗುರುವಿಗೆ ಅತ್ಯಂತ ಗೌರವವಿದೆ, ನಿಮಗಾಗಿ ಗುರುಭವನ ನಿರ್ಮಾಣ ಇನ್ನು ಆಗದಿರುವುದು ವಿಷಾದದ ಸಂಗತಿ. ನಾವು ಹಣ ಕೊಡಲು ಸಿದ್ದವಿದ್ದರೂ ವಿಳಂಬ ಮಾಡುತ್ತಿದ್ದೀರಿ, ಶಾಸಕರು, ಸಂAಸದರ ಅನುದಾನದ ಜತೆ ನಿಮ್ಮ ಒಂದು ದಿನದ ವೇತನ ನೀಡಿ ಎಂದು ಸಲಹೆ ನೀಡಿದರು.

ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಶಿಕ್ಷಣ,ಆರೋಗ್ಯ ಕ್ಷೇತ್ರಗಳು ಎರಡು ಕಣ್ಣುಗಳಿದ್ದಂತೆ ಶಿಕ್ಷಣ, ಆಹಾರ, ಆರೋಗ್ಯ ಇದ್ದರೆ ಮಾತ್ರ ಯಾವುದೇ ದೇಶ ಸಾಧನೆ ಮಾಡಲು ಸಾಧ್ಯವಿದೆ, ಕೋಲಾರದ ನೂತನ ಸರ್ಕಾರಿ ಪ್ರೌಢಶಾಲೆ ನೂತನ ಕಟ್ಟಡಕ್ಕೆ ೧.೨೦ ಕೋಟಿ ರೂ ಮಂಜೂರು ಮಾಡಿಸಿದ್ದೇನೆ, ಅದೇ ರೀತಿ ಬಾಲಕರ ಕಾಲೇಜು ನಮ್ಮ ಕೋಲಾರದ ಅತ್ಯಂತ ಘನತೆಯ ಕಟ್ಟಡವಾಗಿದೆ, ಅದರ ಅಭಿವೃದ್ದಿಗೂ ಶಾಸಕರು ಕೈಜೋಡಿಸಬೇಕು, ಒಳ್ಳೆಯ ದಾಖಲಾತಿ ಇರುವ ಶಾಲೆ ಗುರುತಿಸಿಕೊಟ್ಟಲ್ಲಿ ತಾವೇ ಸ್ವತಃ ತಮ್ಮ ಹಣದಿಂದ ೨ ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಶಾಲಾ ಕಟ್ಟಡ ನಿರ್ಮಿಸಿಕೊಡುವುದಾಗಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶಂಕರ್ ವಣಿಕ್ಯಾಳ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಕಾಸ್ಮೆಟಿಕ್ ಟಜ್ ಬೇಡ, ಅಲ್ಲಿ ಗುಣಾತ್ಮಕ ಶಿಕ್ಷಣ ಸಿಗುವಂತೆ ಮಾಡಿದರೆ ಸಾಕು, ಅಂಕ ಆಧಾರಿತ ಶಿಕ್ಷಣಕ್ಕಿಂತ ಮಕ್ಕಳಿಗೆ ಇಂದು ಮೌಲ್ಯಯುತ ಶಿಕ್ಷಣದ ಅಗತ್ಯವಿದೆ, ಮಕ್ಕಳಿಗೆ ಭಾರತೀಯ ಸಂಸ್ಕೃತಿ ತಿಳಿಸಿಕೊಡಿ, ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಡಿಡಿಪಿಐ ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯ ೧೮ ಮಂದಿಗೆ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿದ್ದು, ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ಇಲಾಖೆ ಸಕಲ ಸಿದ್ದತೆ ನಡೆಸಿದೆ, ಮುಖ್ಯಶಿಕ್ಷಕರ ಸಭೆ ನಡೆಸಲಾಗಿದೆ. ಮಕ್ಕಳ ಕಲಿಕೆಗೆ ಅಗತ್ಯವಾದ ಸಂಪನ್ಮೂಲಗಳ ಸಿದ್ದತೆ ನಡೆದಿದೆ ಎಂದರು.

ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಪ್ರಸ್ತುತ ವರ್ಷ ನಿವೃತ್ತರಾದ ೪೦ಕ್ಕೂ ಹೆಚ್ಚು ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗಳಿಸಿದ ಎಲ್ಲಾ ಆರು ತಾಲ್ಲೂಕುಗಳ ಒಟ್ಟು ೧೮ ಮಂದಿ ಶಿಕ್ಷಕರನ್ನು ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು. ಶಾಸಕ ಕೊತ್ತೂರು ಮಂಜುನಾಥ್ ಕಾಯಕ್ರಮದ ನಂತರ ಎಲ್ಲಾ ಶಿಕ್ಷಕರಿಗೂ ಊಟದ ವ್ಯವಸ್ಥೆ ಮಾಡಿಸಿದ್ದರು.

ಡಯಟ್ ಪ್ರಾಂಶುಪಾಲ ಜಯಣ್ಣ, ಬಿಇಒ ಕನ್ನಯ್ಯ, ಶಿಕ್ಷಣಾಧಿಕಾರಿ ಅಶೋಕ್, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಗಾಯತ್ರಿ,ಶಶಿವಧನ, ಕೃಷ್ಣಪ್ಪ, ಇಸಿಒ ಕೆ.ಶ್ರೀನಿವಾಸ್, ಖಾಸಗಿ ಶಾಲೆಗಳ ಸಂಘದ ಸದಾನಂದ್, ಎಸ್.ಮುನಿಯಪ್ಪ, ಜಗದೀಶ್, ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳಾದ ಜಿ.ಎಂ.ಚAದ್ರಪ್ಪ, ಜಿ.ಶ್ರೀನಿವಾಸ್, ಶಿವಕುಮಾರ್, ಅಪ್ಪೇಗೌಡ,£ Áಗರಾಜ್, ಅಶ್ವಥ್ಥನಾರಾಯಣ, ವಿ.ಮುರಳಿಮೋಹನ್, ಆರ್.ನಾಗರಾಜ್, ಮುನಿಯಪ್ಪ, ಆಂಜನೇಯ, ನಾರಾಯಣರೆಡ್ಡಿ, ಶ್ರೀರಾಮ್ ಮತ್ತಿತರರಿದ್ದರು.

ಚಿತ್ರ ೦೫ ಕೆ.ಎಲ್.ಆರ್. ೦೫ : ಕೋಲಾರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತವi ಪ್ರಶಸ್ತಿ ಶಿಕ್ಷಕರನ್ನು ಶಾಸಕ ಕೊತ್ತೂರು ಮಂಜುನಾಥ್ ಸನ್ಮಾನಿಸುತ್ತಿರುವುದು, ಎಂ.ಎಲ್.ಸಿ.ಗಳಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net