ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ತಹಸೀಲ್ದಾರ್

17HDK02
ಎಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ಸ್ವಾತಂತ್ರೃ ದಿನಾಚರಣೆ ದಿನ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಡದೆ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರತ್ನಾಂಬಿಕೆ ಶಾಲೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ಎಚ್.ಡಿ.ಕೋಟೆ: ತಾಲೂಕಿನ ರಾಜೇಗೌಡನಹುಂಡಿ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಸ್ವಾತಂತ್ರೊೃೀತ್ಸವ ಆಚರಿಸಲಾಗಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರತ್ನಾಂಬಿಕೆ ಬುಧವಾರ ಶಾಲೆಗೆ ಭೇಟಿ ನೀಡಿ, ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.


ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ ಅವರೊಂದಿಗೆ ರಾಜೇಗೌಡನಹುಂಡಿ ಗ್ರಾಮದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರತ್ನಾಂಬಿಕೆ ಅವರು, ಶಾಲೆಯ ಮುಖ್ಯ ಶಿಕ್ಷಕ ಯತೀಶ್‌ಕುಮಾರ್ ಹಾಗೂ ಸಹ ಶಿಕ್ಷಕರಿಂದ ಮಾಹಿತಿ ಪಡೆದರು.
ಶಿಕ್ಷಕರ ಉತ್ತರದಿಂದ ಸಮಾಧಾನಗೊಳ್ಳದ ತಹಸೀಲ್ದಾರ್ ರತ್ನಾಂಬಿಕೆ ಅವರು, ತರಾಟೆಗೆ ತೆಗೆದುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net