ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಗೆ ಕರೊನಾ ಸೋಂಕು

anbu_M_3092020
Published on


ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಆಯುಕ್ತ ಅನ್ಬುಕುಮಾರ್ ಅವರಿಗೆ ಶುಕ್ರವಾರ ಕರೊನಾ ಸೋಂಕು ದೃಢಪಟ್ಟಿದ್ದು ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಸೋಂಕು ದೃಢಪಟ್ಟು ಅವರು ಯಾವುದೇ ಲಕ್ಷಣಗಳಿಲ್ಲದ ಕಾರಣ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇದೀಗ ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ಇತ್ತೀಚೆಗೆ ವರ್ಗಾವಣೆಗೊಂಡಿದ್ದ ಅನ್ಬುಕುಮಾರ್ ಅವರಿಗೂ ಸೋಂಕು ದೃಢಪಟ್ಟಿದೆ. ಆಯುಕ್ತರು ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಆದರೆ, ಚಾಮರಾಜನಗರ ಪ್ರವಾಸ ಮುಗಿಸಿದ ಬಳಿಕ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಪ್ರವಾಸ ಮೊಟಕುಗೊಳಿಸಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಶುಕ್ರವಾರ ಸೋಂಕು ದೃಢಪಟ್ಟಿದೆ. ಕೆಲ ಲಕ್ಷಣಗಳು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net