ಶಿಕ್ಷಣದಿಂದ ಸಮಾಜದ ಪ್ರಗತಿ

20bhr 2 ambika
ಕಟ್ಟಿನಮನೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿ ಟಿ.ಆರ್.ಅಂಬಿಕಾಳನ್ನು ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಪುರಸ್ಕರಿಸಲಾಯಿತು. ಕೆ.ಎಂ.ರಾಘವೇಂದ್ರ, ಮಂಜುನಾಥ ಗೌಡ, ವಾಸು, ವಿಜಯ್‌ಕುಮಾರ್, ಸೋಮಶೇಖರ್, ವಿಶ್ವನಾಥ್ ಇತರರಿದ್ದರು.
Published on

ಬಾಳೆಹೊನ್ನೂರು: ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ ಎಂದು ಎನ್.ಆರ್.ಪುರ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ರಾಘವೇಂದ್ರ ಹೇಳಿದರು.

ಕಟ್ಟಿನಮನೆಯಲ್ಲಿ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿನಿ ಟಿ.ಆರ್.ಅಂಬಿಕಾ ಅವರನ್ನು ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಪುರಸ್ಕರಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದರೆ ಸತ್ಪ್ರಜೆಗಳಾಗಿ ಬದುಕಲು ಸಾಧ್ಯ ಎಂದರು.

ಕಟ್ಟಿನಮನೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಟಿ.ಆರ್.ಅಂಬಿಕಾ ಎಸ್‌ಎಸ್‌ಎಲ್‌ಸಿಯಲ್ಲಿ 612 ಅಂಕಗಳನ್ನು ಪಡೆದು ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ ಎಂದರು.

ಕಟ್ಟಿನಮನೆ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಮಂಜುನಾಥ ಗೌಡ, ಶಿಕ್ಷಕರ ಸಂಘದ ಕಾರ್ಯದರ್ಶಿ ವಾಸು, ಪದಾಧಿಕಾರಿಗಳಾದ ವಿಜಯ್‌ಕುಮಾರ್, ಸೋಮಶೇಖರ್, ವಿಶ್ವನಾಥ್, ವಿಜು, ತಮನ್ನಾ, ನೈನಾ ವಿಶ್ವನಾಥ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net