ಶಿಕ್ಷಣದೊಂದಿಗೆ ಕ್ರೀಡೆಗೂ ಒತ್ತು ನೀಡಿ

29 RPT 1 school
ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗೋಪಾಲಕೃಷ್ಣ ಬೇಳೂರು, ದೇವರಾಜ್, ಸರಿತಾ, ಧನಲಕ್ಷ್ಮೀ ಇತರರಿದ್ದರು.
Published on

ರಿಪ್ಪನ್‌ಪೇಟೆ: ವಿದ್ಯಾರ್ಥಿಗಳು ಅಂಕಗಳಿಸುವುದೇ ಶಿಕ್ಷಣ ಎಂದು ಪರಿಗಣಿಸದೆ ಕಲೆ, ಸಂಸ್ಕೃತಿ ಮತ್ತು ಕ್ರೀಡೆಗಳತ್ತ ಹೆಚ್ಚಿನ ಗಮನಹರಿಸಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಮಂಗಳವಾರ ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಆವರಣದಲ್ಲಿ ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಜಯಗಳಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ಶಿಕ್ಷಣದ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿದಾಗ ಶಿಕ್ಷಣ ಸಂಸ್ಥೆ ಮತ್ತು ಊರಿಗೆ ಒಳ್ಳೆಯ ಹೆಸರು ಬರುತ್ತದೆ ಎಂದರು.

17 ವರ್ಷದೊಳಗಿನವರ ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಶ್ರಾವ್ಯಾ, ಶ್ರೇಯಾ, ದೀಕ್ಷಾ, ಸಂಜನಾ, ಐಶ್ವರ್ಯಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ಸನ್ಮಾನಿಸಲಾಯಿತು.

ವಿದ್ಯಾಲಯ ಸಂಸ್ಥಾಪಕ ದೇವರಾಜ್, ಸರಿತಾ ದೇವರಾಜ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ, ಸದಸ್ಯರಾದ ಗಣಪತಿ, ಆಸ್ೀ ಮಧುಸೂದನ, ಚಂದ್ರೇಶ, ಸುಂದರೇಶ, ನಿರುಪಮಾ, ಸಾರಾಬಿ, ಪ್ರಕಾಶ್ ಪಾಲೇಕ್, ಮುಖಂಡರಾದ ಬಂಡಿ ರಾಮಚಂದ್ರ, ರವೀಂದ್ರ, ಮುಖ್ಯ ಶಿಕ್ಷಕ ರವಿ, ಶಿಕ್ಷಕರಾದ ಗುರುರಾಜ, ಸಂದೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net