ಶಿವಮೂರ್ತಿ ಶರಣರ ಪೋಕ್ಸೋ ಪ್ರಕರಣ ದೋಷಾರೋಪಣಾ ನಿಗದಿ

Sharanaru
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;
Published on

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ಮೇಲಿನ ಮೊದಲ ಪೋಕ್ಸೋ ಪ್ರಕರಣ ಸಂಬಂಧ ಶುಕ್ರವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದೋಷಾರೋಪಣಾ ನಿಗದಿ ಮಾಡಿಕೊಂಡು ಪ್ರಕರಣ ಜೂ. 3ಕ್ಕೆ ಮುಂದೂಡಿತು.

ನ್ಯಾಯಾಧೀಶರ ಮುಂದೆ ಮೊದಲ ಪ್ರಕರಣದ ಆರೋಪಿತರಾದ ಶಿವಮೂರ್ತಿ ಮುರುಘಾ ಶರಣರು, ರಶ್ಮಿ, ಪರಮಶಿವಯ್ಯ ಹಾಜರಾದರು.

ಸುಪ್ರೀಂ ಹಾಗೂ ಹೈಕೋರ್ಟ್ ಆದೇಶದಂತೆ ನ್ಯಾಯಾಧೀಶ ಗಂಗಾಧರಪ್ಪ ಚನ್ನಬಸಪ್ಪ ಅಡಪದ ಅವರು ಪೋಕ್ಸೋ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು ಪರ ಮತ್ತು ವಿರುದ್ಧ ವಕೀಲರ ಅಹವಾಲು ಸ್ವೀಕರಿಸಿದರು.

ಸರ್ಕಾರಿ ಅಭಿಯೋಜಕ ಜಗದೀಶ್ ಅವರು ಸಾಕ್ಷಿಗಳ ವಿಚಾರಣೆಗೆ ಅವಕಾಶ ಕೋರಿದರು. ಆರೋಪಿತರ ಪರ ವಕೀಲ ಕೆ.ಬಿ.ಕೆ.ಸ್ವಾಮಿ ವಾದ ಮಂಡಿಸಿ, ಇದಕ್ಕೆ ಎರಡು ದಿನಗಳ ಕಾಲಾವಕಾಶ ಕೇಳಿದರಲ್ಲದೆ, ಸುಪ್ರೀಂ ನಿರ್ದೇಶನದಂತೆಯೇ ಸಾಕ್ಷಿಗಳ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿಕೊಂಡರು.

ಈ ಪ್ರಕರಣದಲ್ಲಿ ಮುಖ್ಯ ಸಾಕ್ಷಿದಾರರ ವಿಚಾರಣೆಗೂ ಮುನ್ನ ನ್ಯಾಯಾಲಯಕ್ಕೆ ಸಾಕ್ಷಿದಾರರ ಪಟ್ಟಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶವಿದ್ದು, ಅದನ್ನು 3ರಂದು ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ.

ಮೊದಲ ಪ್ರಕರಣದಲ್ಲಿ ಎರಡು ದೋಷಾರೋಪ ಪಟ್ಟಿ ಸಲ್ಲಿಕೆಯಾಗಿವೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣವನ್ನು 3ಕ್ಕೆ ಮುಂದೂಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net