ಶೀಘ್ರದಲ್ಲೇ ಮೈಸೂರಿನಲ್ಲಿ 25ನೇ ವಚನ ಸಾಹಿತ್ಯ ಸಮ್ಮೇಳನ ಆಯೋಜನೆ

Basavanna-2
Published on

ಅಖಿಲ ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ವತಿಯಿಂದ 25ನೇ ವಚನ ಸಾಹಿತ್ಯ ಸಮ್ಮೇಳನವನ್ನು ಶೀಘ್ರದಲ್ಲೇ ಮೈಸೂರಿನಲ್ಲಿ ಆಯೋಜಿಸಲಾಗುವುದು ಎಂದು ಬೆಂಗಳೂರಿನ ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ತಿಳಿಸಿದರು.

ವಚನ ಸಾಹಿತ್ಯದ ಬಗ್ಗೆ ಅಪಾರವಾದ ಅಧ್ಯಯನ ಮತ್ತು ಸಂಶೋಧನೆ ನಡೆಸಿದ ವಿದ್ವಾಂಸರಿಂದ ವಿಚಾರಗೋಷ್ಠಿಗಳನ್ನು ಆಯೋಜಿಸುವ ಮೂಲಕ ವಚನ ಸಾಹಿತ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು. ಜತೆಗೆ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬದುಕು ಮತ್ತು ಸಾಧನೆಯನ್ನು ಒಳಗೊಂಡಿರುವ ಅತ್ಯಮೂಲ್ಯವಾದ ಬೃಹತ್ ಗ್ರಂಥವನ್ನು ಅಂದಿನ ಸಮಾವೇಶದಲ್ಲಿ ಲೋಕಾರ್ಪಣೆಗೊಳಿಸಲಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ, ಅಖಿಲ ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಡಾ.ಶಿವಕುಮಾರ ಸ್ವಾಮಿ, ಸಹ ಕಾರ್ಯದರ್ಶಿ ಸತೀಶ್, ರವೀಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net