ಶುಶ್ರೂಷಕರಿಗೆ ಮಾಸಿಕ 5 ಸಾವಿರ ಕೋವಿಡ್ ರಿಸ್ಕ್ ಪ್ರೋತ್ಸಾಹ ಧನ

PPE
Published on

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ವೈಯಕ್ತಿಕ ಸುರಕ್ಷಾ ಸಾಧನೆ (ಪಿಪಿಇ) ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಮಾಸಿಕ 5 ಸಾವಿರ ಕೋವಿಡ್ ರಿಸ್ಕ್ ಪ್ರೋತ್ಸಾಹ ಧನ ನೀಡಲು ಸರ್ಕಾರ ಅದೇಶ ಹೊರಡಿಸಿದೆ.

ಇಲಾಖೆ ಅಡಿಯಲ್ಲಿನ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಪಿಪಿಇ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಕಾಯಂ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ಶುಶ್ರೂಷಕರಿಗೆ ಇದು ಆನ್ವಯವಾಗಲಿದ್ದು, ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಪ್ರೋತ್ಸಾಹ ಧನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net