ಶೈಕ್ಷಣಿಕ ಅವಧಿ, ಮಧ್ಯಂತರ ರಜೆ ಕಡಿತ

2020_2$largeimg_1395482891
Published on


ಬೆಂಗಳೂರು
ಈ ಬಾರಿ ಶೈಕ್ಷಣಿಕ ಅವಧಿಗಳು ದೊರೆಯುವುದು ಕಡಿಮೆಯಾಗುತ್ತಿರುವುದರಿಂದ 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿ ಕಡಿತ ಮಾಡಿದೆ.
ಈ ಮೊದಲು ಮಧ್ಯಂತರ ಅವಧಿ, ಬೇಸಿಗೆ ರಜೆಗಳನ್ನು ಲೆಕ್ಕಹಾಕಿ ೆಬ್ರವರಿಯಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಅನಂತರ ಕರೊನಾ ಬಂದ ಕಾರಣ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಈ ಹಿನ್ನೆಲೆಯಲ್ಲಿ ೆಬ್ರವರಿಯಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದೆ. ಪ್ರಸ್ತುತ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಇಲಾಖೆಯಿಂದ ವಿವಿಧ ಹಂತದಲ್ಲಿ ಜಾರಿಗೊಳಿಸುವ ಆದೇಶಗಳಂತೆ ಕಾರ್ಯನಿರ್ವಹಿಸಬೇಕು. ಅಲ್ಲದೆ, ಅಗಸ್ಟ್‌ನಲ್ಲಿ ಹೊರಡಿಸಿದ ಸುತ್ತೋಲೆ ಪ್ರಕಾರ ವಿದ್ಯಾಗಮ ಕಲಿಕಾ ಕಾರ್ಯಕ್ರಮವನ್ನು ಯಥಾವತ್ತಾಗಿ ಮುಂದಿನ ಆದೇಶದವರೆಗೆ ಅನುಷ್ಠಾನಗೊಳಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net