ಶೈಕ್ಷಣಿಕ ಅವಧಿಯಲ್ಲಿ ಪಠ್ಯೇತರ ಚಟುವಟಿಕೆಗಳು ಅಗತ್ಯ

28NGD1
Published on

ನಂಜನಗೂಡು: ಶೈಕ್ಷಣಿಕ ಅವಧಿಯಲ್ಲಿ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಮಾನಸಿಕ, ದೈಹಿಕವಾಗಿ ಸದೃಢಗೊಳಿಸಲು ಸಹಕಾರಿಯಾಗಿವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.


ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಸಾಂಸ್ಕೃತಿಕ, ಕ್ರೀಡಾ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಿಯುಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ವ್ಯಾಸಂಗದ ಹೊರತಾಗಿ ಯಾವುದೇ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ತಮ್ಮ ಪ್ರತಿಭೆ ಗುರುತಿಸಿಕೊಳ್ಳಲು ಇಂತಹ ವೇದಿಕೆಗಳು ಅವಶ್ಯಕ ಎಂದರು.


ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ನಾಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಪ್ರಾಂಶುಪಾಲ ಡಾ.ಟಿ.ಆರ್.ಸಿದ್ದರಾಜು, ಉಪ ಪ್ರಾಂಶುಪಾಲ ರಘು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಜೀಉಲ್ಲಾ ಖಾನ್, ಪಿಡಿಒ ಪುರುಷೋತ್ತಮ್, ಗ್ರಾಪಂ ಸದಸ್ಯರಾದ ನವೀನ್, ಸಿದ್ದಲಿಂಗಪ್ಪ, ಮಂಜುನಾಥ್ ಪಟೇಲ್, ಗುರುಪಾದಪ್ಪ, ಪ್ರಶಾಂತ್, ಮಾದೇವಯ್ಯ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net