ಶೈಕ್ಷಣಿಕೆ ಪ್ರಗತಿಗೆ ವಿದ್ಯಾರ್ಥಿನಿಲಯ ಪೂರಕ

Published on

ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ಎಲ್ಲ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿನಿಲಯಗಳು ಪೂರಕವಾಗಿವೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದ ನಿಸರ್ಗಾ ಬಡಾವಣೆಯಲ್ಲಿ 3.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಹಿಂದುಳಿದ ವರ್ಗಗಳ ವಸತಿ ಶಾಲೆ ಹೇಗೆ ಹಲವಾರು ವಸತಿ ಶಾಲೆಗಳಿವೆ. ಎಲ್ಲ ವಸತಿ ಶಾಲೆಯಲ್ಲಿ ಶೈಕ್ಷಣಿಕ ಪ್ರಗತಿಗೆ ಉತ್ತಮ ವಾತಾವರಣವಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಉತ್ತಮ ಲಿತಾಂಶ ಪಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ವಸತಿ ನಿಲಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದರು.
ತಾಲೂಕಿನ ಜಡಿಗೇನಹಳ್ಳಿ ಭಾಗದಲ್ಲಿ ಶೀಘ್ರವೇ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆರಂಭಿಸಿ, ತಾಂತ್ರಜ್ಞಾನ ವಿಷಯ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು. ಹಾಗೆಯೇ, ನಂದಗುಡಿ ಹಾಗೂ ದೇವಲಾಪುರ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸಿ, ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದರು.
ತಾಲೂಕಿನಲ್ಲಿ ಪ್ರಥಮ ದರ್ಜೆ ಕಾಲೇಜು, ಐಟಿಐ ತಾಂತ್ರಿಕ ಕಾಲೇಜು ಹಾಗೂ ಹಲವಾರು ವಸತಿ ಶಾಲೆಗಳನ್ನು ತರಲು ಸಂಸದ ಬಚ್ಚೇಗೌಡರ ಕೊಡುಗೆ ಅಪಾರವಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ, ಎಸ್. ಕೆ. ಪದ್ಮನಾಬ್, ತಾಪಂ ಇಒ ಚಂದ್ರಶೇಖರ್, ನಗರಸಭೆ ಸದಸ್ಯರಾದ ಗೌತಮ್, ಕೇಶವಮೂರ್ತಿ, ಮುಖಂಡರಾದ ಬಿ.ವಿ. ಬೈರೇಗೌಡ, ದೇವರಾಜ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರೀತಿ, ವಾರ್ಡನ್‌ಗಳಾದ ಶರಣ್ ಗೌಡ್, ಆಂಜಿನಪ್ಪ, ಸಾವಿತ್ರಿ, ಸಿಬ್ಬಂದಿ ಸಿದ್ದೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net