ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Application
Published on

ರಾಜ್ಯ ಸರ್ಕಾರದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಕ್ಟೋಬರ್ 07 ರಂದು ಆಚರಿಸಲಾಗುತ್ತಿದ್ದು, ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದ (ST) ಜನಾಂಗದ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.

 ಜಿಲ್ಲಾ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರು ಅರ್ಜಿಯನ್ನು ಸಂಬoಧಿಸಿದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಹಾಗೂ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮೈಸೂರು ಜಿಲ್ಲೆ, ಮೈಸೂರು ರವರ ಕಛೇರಿಯಲ್ಲಿ ಅರ್ಜಿಯನ್ನು ಪಡೆದು ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 09 ರ ಸಂಜೆ 5.00 ಗಂಟೆಯ ಒಳಗಾಗಿ ದ್ವಿ ಪ್ರತಿಯಲ್ಲಿ ಸಲ್ಲಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮೈಸೂರು ಜಿಲ್ಲೆ, ಮೈಸೂರು ಡಾ.ಬಾಬು ಜಗಜೀವನರಾಮ್ ಭವನ, ಒಂಟಿಕೊಪ್ಪಲು, ಪೂರ್ವ ಬಡಾವಣೆ, ಆದಿಪಂಪ ರಸ್ತೆ, ಪಡುವಾರಹಳ್ಳಿ, ಮೈಸೂರು-570012 ಮೊ.ಸಂ. 9742099989 ನ್ನು ಸಂಪರ್ಕಿಸ ಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net