ಸದನದಲ್ಲಿ ಕೋಮುಲ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ ಶಾಸಕ ಎಸ್.ಎನ್. / ಸ್ವಪಕ್ಷ ಶಾಸಕರ ವಿರುದ್ಧವೇ ಗುಡುಗುತ್ತಿರುವ ಎಸ್.ಎನ್ / ಜಿಲ್ಲೆಯ ಸಮಸ್ಯೆಗಳ ಬಗ್ಗೆ ಕೈಬಿಟ್ಟ ಶಾಸಕರು

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಎನ್.ಮುನಿವೆಂಕಟೇಗೌಡ

ಕೋಲಾರ ಜಿಲ್ಲೆಯಲ್ಲಿ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಬೇಕಾಗಿದ್ದ ಕಾಂಗ್ರೇಸ್ ಶಾಸಕರಿಬ್ಬರು ತಮ್ಮ ವೈಯುಕ್ತಿಕ ಪ್ರತಿಷ್ಠೆಗಳನ್ನು ಮುಂದಿಟ್ಟುಕೊAಡು ಅಧಿವೇಶನದಲ್ಲಿ ಕೋಮುಲ್, ಗಣಿಗಾರಿಕೆ ವಿಷಯಗಳ ಬಗ್ಗೆ ಸದ್ದು ಮಾಡುತ್ತಿದ್ದಾರೆ.

ಸರ್ಕಾರದ ಆಡಳಿತ ವೈಫಲ್ಯಗಳ ಬಗ್ಗೆ ಧ್ವನಿಯೆತ್ತಬೇಕಾಗಿರುವುದು ವಿರೋಧಪಕ್ಷಗಳು. ಆದರೆ ಕೋಲಾರ ಜಿಲ್ಲೆಯಲ್ಲಿ ಇಬ್ಬರು ಪ್ರತಿಷ್ಠಿತ ಕಾಂಗ್ರೇಸ್ ಪಕ್ಷದ ಶಾಸಕರು ವಿರೋಧಪಕ್ಷದವರಂತೆ ಪ್ರತಿದಿನ ತಮ್ಮ ವೈಯುಕ್ತಕ ಪ್ರತಿಷ್ಠೆಗಳಿಗಾಗಿ ಸದನದಲ್ಲಿ ಚರ್ಚೆ ಮಾಡಲು ಮುಂದಾಗಿರುವುದು ನಗೆಪಾಟಲಿಗೆ ಗುರಿಯಾಗಿದೆ.

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಕಳೆದ ಒಂದು ವರ್ಷಗಳಿಂದ ಹಾವು ಮುಂಗಸಿಗಳAತೆ ಇದ್ದು, ಕೋಮುಲ್ ಚುನಾವಣೆ ಸಂದರ್ಭದಲ್ಲಿ ಹಾಗೂ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ಸಂದರ್ಭದಲ್ಲಿ ಬಹಿರಂಗವಾಗಿ ಕಾದಾಡಿಕೊಂಡು ಪರಸ್ಪರ ಹೇಳಿಕೆಗಳನ್ನು ನೀಡುತ್ತಾ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಂಡಿದ್ದರು.

ಈ ಇಬ್ಬರು ಶಾಸಕರ ವೈಮನಷ್ಯ ಹೈಕಮ್ಯಾಂಡ್ ಕದ ಮುಟ್ಟಿತಾದರೂ ಹೈಕಮ್ಯಾಂಡ್ ಇದಕ್ಕೆ ಸೊಪ್ಪು ಹಾಕಲಿಲ್ಲ. ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಇತ್ತೀಚೆಗೆ ಕಾಂಗ್ರೇಸ್ ಶಾಸಕರ ಸಂಪರ್ಕದಿAದ ದೂರವಿದ್ದು, ಕಾಂಗ್ರೇಸ್ ಶಾಸಕರ ವಿರುದ್ಧವೇ ಆಗಾಗ ತಿರುಗಿಬೀಳುವ ಕೆಲಸ ಮಾಡುತ್ತಿದ್ದಾರೆ. ಈಗ ನಡೆಯುತ್ತಿರುವ ಸದನದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಮುಲ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಹಾಗೂ ಮಾಲೂರು ತಾಲ್ಲೂಕು ಟೇಕಲ್ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ವಿಷಂiÀiವನ್ನು ಸದನದಲ್ಲಿ ಪ್ರಸ್ತಾಪಿಸಿ ಇದಕ್ಕೆ ಕಡಿವಾಣ ಹಾಕಬೇಕು ಎಂದಿದ್ದಾರೆ.

ಕೋಮುಲ್‌ನಲ್ಲಿ ನಡೆದಿರುವ ಹಗರಣ ಹಾಗೂ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿರುವ ವಿಷಯದ ಬಗ್ಗೆ ಸದನದಲ್ಲಿ ಚರ್ಚಿಸಿ ಕಾನೂನು ಬಾಹಿರವಾಗಿ ಸೋಲಾರ್ ಪ್ಲಾಂಟ್‌ಗೆ ಜಮೀನು ಮಂಜೂರು ಮಾಡಲಾಗಿದೆ ಎಂದು ವಿಷಯ ಮಂಡನೆ ಮಾಡುತ್ತಿದ್ದಾಗ ಮಧ್ಯ ಪ್ರವೇಶ ಮಾಡಿದ ಕೋಮುಲ್ ಅಧ್ಯಕ್ಷರೂ ಆಗಿರುವ ಶಾಸಕ ಕೆ.ವೈ.ನಂಜೇಗೌಡ ಹಾಗೂ ಎಸ್.ಎನ್.ನಾರಾಯಣಸ್ವಾಮಿ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಗುರುವಾರ ಟೇಕಲ್ ಸುತ್ತಮುತ್ತ ಅಕ್ರಮ ಗಣಿಗಾರಿಕೆಯಿಂದ ೧೦ ವರ್ಷದಲ್ಲಿ ಸುಮಾರು ೮೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಸಂಬAಧ ಸಚಿವರು ತನಿಖೆ ನಡೆಸಬೇಕು. ಹಾಗೂ ರಾಜ್ಯ ಸರ್ಕಾರಕ್ಕೆ ರಾಯಲ್ಟಿ ಕಟ್ಟದೆ ಮೋಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಗಣಿಗಾರಿಕೆ ಮಾಡುತ್ತಿರುವವರನ್ನು ಪತ್ತೆಹಚ್ಚಿ ಅಕ್ರಮ ಗಣಿಗಾರಿಕೆಯನ್ನು ಮುಚ್ಚಬೇಕೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸದನದಲ್ಲಿ ಆಗ್ರಹಿಸಿದರು.

ಶಾಸಕ ಕೆ.ವೈ.ನಂಜೇಗೌಡ ರವರ ಹೆಸರು ಹೇಳದೆ ಒಂದೇ ಕುಟುಂಬದಲ್ಲಿ ಮಗ, ಸೊಸೆ, ಸಹೋದರ, ಹೆಂಡತಿ ಹೀಗೆ ಹತ್ತಾರು ಹೆಸರುಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಉಪಲೋಕಾಯುಕ್ತರು ಮಾಲೂರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕೇಸು ದಾಖಲಿಸುವಂತೆ ಸೂಚನೆ ನೀಡಿದ್ದರೂ ಸಹ ಅಕ್ರಮ ಗಣಿಗಾರಿಕೆಯನ್ನು ನಡೆಸುತ್ತಿರುವ ಮಾಲೀಕರು ಯಾವುದಕ್ಕೂ ಜಗ್ಗುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕ್ಟಾರಿಗಳಿಂದ ೬೩ ಕೋಟಿ ರಾಯಲ್ಟಿ ಬಾಕಿ ಇದೆ. ಸರ್ಕಾರ ನೋಟಿಸ್ ಕೊಟ್ಟಿದ್ದರೂ ಜಗ್ಗುತ್ತಿಲ್ಲ. ಇಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಚಿವರು ಮಾತನಾಡಿ, ಮಾಲೂರು ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆಯು ನಡೆದಿರುವುದು ಕಂಡುಬAದಿದೆ. ಈಗಾಗಲೇ ನೋಟಿಸ್ ನೀಡಲಾಗಿದೆ. ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಮೇಲಧಿಕಾರಿಗಳಿಗೆ ಸೂಚನೆ ಕೊಟ್ಟು ಪರಿಸರ ಮಾಲಿನ್ಯ ಮಂಡಳಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಮೌಖಿಕವಾಗಿ ವಿಚಾರಣೆ ನಡೆಸಿ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಸದನದಲ್ಲಿ ತಿಳಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ಎಸ್.ಎನ್.ನಾರಯಣಸ್ವಾಮಿ ಸರ್ಕಾರ ಕಣ್ಣೆರೆಸುವ ಕೆಲಸ ಮಾಡುವುದು ಬೇಡ. ಶ್ರೀಮಂತರಿಗೊAದು ಬಡವರಿಗೊಂಡು ನ್ಯಾಯ ಬೇಕಾಗಿಲ್ಲ. ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಸರ್ಕಾರಕ್ಕೆ ಬಾಕಿ ಇರುವ ರಾಯಲ್ಟಿ ವಸೂಲಿ ಮಾಡಬೇಕೆಂದು ಆಗ್ರಹಿಸಿದರು.

ಚಿತ್ರ ೨೨ ಕೆ.ಎಲ್.ಆರ್. ೦೧ : ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭಾವಚಿತ್ರ

ಚಿತ್ರ ೨೨ ಕೆ.ಎಲ್.ಆರ್. ೦೧ಎ : ಶಾಸಕ ಕೆ.ವೈ.ನಂಜೇಗೌಡ ಭಾವಚಿತ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net