ಸಮಗ್ರ ಕೃಷಿ ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ / ಯೋಜನೆಗಳ ಅನುಷ್ಠಾನಕ್ಕೆ ೨೭.೬೯ ಲಕ್ಷ ರೂ.ಗಳ ಅನುದಾನ ಮೀಸಲು / ಡಿಸಿ ಅಕ್ರಂ ಪಾಷ

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದಕ್ಕೆ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಹಾಗೂ ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆಗಳ ಯೋಜನೆಗಳ ಅನುಷ್ಠಾನಕ್ಕೆ ೨೭.೬೯ ಲಕ್ಷ ರೂ.ಗಳ ಅನುದಾನ ಮೀಸಲಿಡಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಳೆ ಸಮೀಕ್ಷೆ ಕಾರ್ಯದ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ ಕೃಷಿ, ಪಶು ಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡAತೆ ಸಮಗ್ರ ಕೃಷಿಯನ್ನು ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು. ಮಣ್ಣಿನ ಗುಣಮಟ್ಟ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗ ದರ್ಶನ ನೀಡಬೇಕು ಎಂದರು.

ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮತ್ತು ಸಂಗ್ರಹಣೆ ಹಾಗೂ ಮೌಲ್ಯ ವರ್ಧನೆಯ ಕುರಿತು ಅರಿವು ಮೂಡಿಸಬೇಕು. ರೈತರು ಬೆಳೆದ ಬೆಳೆಗೆ ಉತ್ತಮ ಬೆಳೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸಬೇಕು ಎಂದು ತಿಳಿಸಿದರು.

ರೈತರಿಗೆ ಮಣ್ಣು ಪರೀಕ್ಷೆಯ ಆಧಾರದ ಮೇಲೆ ಯಾವ ಬೆಳೆ ಬೆಳೆಯಬೇಕು. ಅದರಿಂದ ಉತ್ಪಾದಿಸಿದ ಪದಾರ್ಥಗಳಿಗೆ ಸಂಸ್ಕರಣೆ ರಫ್ತು ಮಾಡುವುದರ ಬಗ್ಗೆ ಅರಿವು ಹಾಗೂ ರೈತರ ಉತ್ಪನ್ನಗಳಿಗೆ ಬ್ರ‍್ಯಾಡಿಂಗ್ ಮತ್ತು ಮಾರುಕಟ್ಟೆ ಕಲ್ಪಿಸಲು ಆರ್ಥಿಕ ನೆರವು ಒದಗಿಸಬೇಕು ಎಂದರು.

ಕೃಷಿ ಭಾಗ್ಯ ಯೋಜನೆಯ ರೈತ ಫಲಾನುಭವಿಗಳನ್ನು ಕೇಂದ್ರೀಕರಿಸಿ ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆಯಲ್ಲಿನ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅವಕಾಶ ಕಲ್ಪಿಸಿ ಸಮೃದ್ಧಿ ರೈತರನ್ನಾಗಿ ರೂಪಿಸಬೇಕು. ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಕರ್ನಾಟಕ ರೈತ ಸಮೃದ್ಧಿ ಯೋಜನೆಯ ಮೂಲಕ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲು ಉತ್ತೇಜನ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧೀಕಾರಿಗಳಾದ ಬಿ.ನಿಖಿಲ್, ಜಂಟಿ ಕೃಷಿ ನಿರ್ದೇಶಕರಾದ ಸುಮಾ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೧೦ ಕೆ.ಎಲ್.ಆರ್. ೦೬ : ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಳೆ ಸಮೀಕ್ಷೆ ಕಾರ್ಯದ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂಪಾಷ, ಎಸ್.ಪಿ.ಬಿ.ನಿಖಿಲ್, ಜಂಟಿ ಕೃಷಿ ನಿರ್ದೇಶಕರಾದ ಸುಮಾ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net