ಸಮರ್ಥನಂ ಅಂಗವಿಕಲರ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

32
Published on

ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯಲ್ಲಿ ಆವರಣದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಸಮರ್ಥನಂ ಬುದ್ಧಿ ವಿಕಲಚೇತನ ಮಕ್ಕಳ ಶಾಲೆಯ ಭ್ರಮಾರಂಭದಲ್ಲಿ ಮುಖ್ಯ ಶಿಕ್ಷಕಿ ಧ್ವಜಾರೋಹಣ ನೆರೆವೇರಿಸಿದರು. ನಂತರ ಮಾತನಾಡಿದ ಅವರು, ಭಾರತದ ಸಂವಿಧಾನವು ಜಾತಿ, ಮತ, ಲಿಂಗ, ಭಾಷೆ, ಸಂಸ್ಕೃತಿಯ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೇ ಸಮ ಸಮಾಜ ನಿರ್ಮಾಣದ ಆಶಯವನ್ನು ಹೊಂದಿದೆ.

ಈ ನಿಟ್ಟಿನಲ್ಲಿ ಸಂವಿಧಾನದ ಸಾರ್ಥಕತೆ ಮತ್ತು ಪ್ರಜಾಪ್ರಭುತ್ವದ ಯಶಸ್ಸು, ಕಾನೂನುಗಳ ಅನುಷ್ಠಾನ ಮತ್ತು ಜನ ಸಾಮಾನ್ಯರ ಭಾಗವಹಿಸುವಿಕೆಯನ್ನು ಅವಲಂಬಿಸಿದೆ ಎಂದು ತಿಳಿಸಿದರು. ಅಲ್ಲದೇ, ಸಂವಿಧಾನದ ಮೂಲ ಆಶಯ ಸಾಮಾಜಿಕ ನ್ಯಾಯವಾಗಿದೆ. ಇತರೆ ದೇಶಗಳ ಸಂವಿಧಾನಕ್ಕೆ ಹೋಲಿಸಿದರೆ ನಮ್ಮ ಸಂವಿಧಾನ ಒಕ್ಕೂಟ ವ್ಯವಸ್ಥೆಯಲ್ಲಿನ ಸಾಮರಸ್ಯದಿಂದಾಗಿ ಭಿನ್ನವಾಗಿ ನಿಲ್ಲುವುದು. ಸಂವಿಧಾನ ಜಾರಿಯ ಪ್ರಾರಂಭದಲ್ಲೇ ಪುರುಷ ಮತ್ತು ಮಹಿಳೆ ಇಬ್ಬರಿಗೂ ಮತದಾನದ ಹಕ್ಕು ನೀಡಿದೆ ಎಂದರು. ಸಂಯೋಜಕ ಮಂತೇಶ, ಕಂಪ್ಯೂಟರ್ ಶಿಕ್ಷಿಕಿ ಸ್ಪರ್ಶ, ವಿಶೇಷ ಶಿಕ್ಷಕಿಯರಾದ ಬೃಂದಾಬಾಯಿ, ಎಚ್.ವಿದ್ಯಾವತಿ, ಭುವನಾ, ಶರೀಫ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net