

ಸರಗಳ್ಳನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 2.4 ಲಕ್ಷ ರೂ. ವೌಲ್ಯದ 2 ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಆತನ ಬಂಧನದಿಂದ ಎರಡು ಸರಗಳ್ಳತನ ಪ್ರಕರಣ ಪತ್ತೆಯಾಗಿದೆ. ಕಳೆದ ಮಾ. 30 ರಂದು ನಜರ್‌ಬಾದ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿತ್ತು. ಈ ಸಂಬಂಧ ಸರಗಳ್ಳನ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಏ.7 ರಂದು ಸಿಸಿಬಿ ಪೊಲೀಸರು ನಗರ ಪೀಪಲ್ಸ್ ಪಾರ್ಕ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.