ಸರ್ಕಾರಗಳು ಜಿಲ್ಲೆಯನ್ನು ಬರಗಾಲದ ಜಿಲ್ಲೆಯೆಂದು ಘೋಷಿಸಲು ಪ್ರಾಂತ ರೈತ ಸಂಘ ಒತ್ತಾಯ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಕೋಲಾರ ಜಿಲ್ಲೆಗೆ ಸರ್ಕಾರ ಕೂಡಲೇ ಬರಗಾಲದ ಪರಿಹಾರಗಳ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ವತಿಯಿಂದ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದರು.

ಕೆ.ಪಿ.ಆರ್.ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ರಾಜ್ಯದ ಬಹುತೇಕ ಕಡೆಗಳಲ್ಲಿ ಬರಗಾಲ ಆವರಿಸಿದೆ, ಜೂನ್ ತಿಂಗಳಲ್ಲಿ ಬಹಳ ವಿಳಂಬವಾಗಿ ಪ್ರಾರಂಭವಾದ ಮುಂಗಾರು ಮಳೆಯು ಜುಲೈ ಮಧ್ಯ ಭಾಗದಿಂದ ಇಲ್ಲಿಯವರೆಗೆ ಎರಡು ತಿಂಗಳು ಕಾಲ ಮಳೆ ಬೀಳದೇ ರೈತರನ್ನು ಹಾಗೂ ಗ್ರಾಮೀಣ ಪ್ರದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರಗಾಲಕ್ಕೆ ಪರಿಹಾರ ನೀಡಲು ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ನಿಗಧಿ ಮಾಡಿರುವ ಮಾನದಂಡಗಳು, ರಾಜ್ಯ ಸರ್ಕಾರವನ್ನು ಕೈ ಕಟ್ಟಿ ಹಾಕಿದೆ ಎಂದು ರಾಜ್ಯ ಸರ್ಕಾರದ ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದರೆ, ಇನ್ನೊಂದು ಕಡೆ ಕರ್ನಾಟಕದ ಬರ ಪರಿಸ್ಥಿತಿ ತನಗೆ ಏನೂ ಸಂಬAಧವಿಲ್ಲ ಎಂಬAತೆ ಪ್ರಧಾನಿ ಮೋದಿ ಹಾಗೂ ರಾಜ್ಯದ ಸಂಸದರು ವರ್ತಿಸುತ್ತಿರುವುದು ಖಂಡನೀಯ. ಹಿಂದೆAದೂ ಇಲ್ಲದಷ್ಟು ಬರ ಪರಿಸ್ಥಿತಿಗೆ ಸಿಲುಕಿರುವ ರೈತಾಪಿ ಸಮುದಾಯವನ್ನು ಕಾಪಾಡಲು ಅಗತ್ಯ ಕ್ರಮಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಆಲಹಳ್ಳಿ ವೆಂಕಟೇಶಪ್ಪ ಮಾತನಾಡಿ, ಕೇಂದ್ರ ಸರ್ಕಾರವು, ಎಲ್ಲಾ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಎಲ್ಲಾ ರೀತಿಯ ಸಾಲ ವಸೂಲಾತಿಯನ್ನು ನಿಷೇಧಿಸಿ ಆದೇಶ ಹೊರಡಿಸಬೇಕು. ಉದ್ಯೋಗ ಖಾತರಿ ಯೋಜನೆಯ ಕೆಲಸದ ದಿನಗಳನ್ನು ೨೦೦ ದಿನಕ್ಕೆ ಹೆಚ್ಚಿಸಬೇಕು. ಬರಗಾಲದ ಕೂಲಿಯಾಗಿ ೬೦೦ ರೂ ಪಾವತಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ತಾಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಉಪಾಧ್ಯಕ್ಷರಾದ ಟಿ.ಕೃಷ್ಣೇಗೌಡ, ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮುಖಂಡರಾದ ಎನ್.ಯಲ್ಲಪ್ಪ, ಅಪ್ಪಯ್ಯಣ್ಣ, ಮುನಿರತ್ನಮ್ಮ, ವೀರೇಗೌಡ, ಚಿನ್ನಮ್ಮ ಮುಂತಾದವರಿದ್ದರು.

ಚಿತ್ರ ೧೧. ಕೆ.ಎಲ್.ಆರ್. ೦೪ : ಜಿಲ್ಲೆಯನ್ನು ಬರಗಾಲ ಜಿಲ್ಲೆಯೆಂದು ಘೋಷಣೆ ಮಾಡಿ, ಬರಗಾಲದ ಪರಿಹಾರಗಳ ವಿಶೇಷ ಪ್ಯಾಕೇಜ್ ಗಳನ್ನು ನೀಡಬೇಕೆಂದು ಒತ್ತಾಯಿಸಿ ರೈತ ಸಂಘ ಪ್ರತಿಭಟನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net