

ಲಿಂಗದಹಳ್ಳಿ: ಮಹಿಳೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ನೀಡುತ್ತಿದ್ದು ಅರ್ಹ ಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡೇವಾ ಗ್ರಾಪಂ ಅಧ್ಯಕ್ಷೆ ಭಾರತಿ ರಾಜಪ್ಪ ಹೇಳಿದರು.
ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಸೌಲಭ್ಯಕ್ಕಾಗಿ ಬೇಟಿ ಬಜಾವೋ, ಬೇಟಿ ಪಾಡಾವೋ ಯೋಜನೆ, ಸಿಲಿಂಡರ್‌ಗಳಿಗೆ ಸಬ್ಸಿಡಿ, ಬಸ್‌ನಲ್ಲಿ ಉಚಿತ ಪ್ರಯಾಣ , ಗೃಹಜ್ಯೋತಿ, ಗೃಹಲಕ್ಷ್ಮಿಗಳಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ಹಾಗೂ ರಾಜ್ಯದ ಜನರ ಆರ್ಥಿಕ ಪ್ರಗತಿಗೆ ಸಹಕಾರ ನೀಡುತ್ತಿದೆ ಎಂದರು.
ತೋಟಗಾರಿಕಾ ಇಲಾಖಾ ಸಹಾಯಕ ನಿರ್ದೇಶಕ ಯತಿರಾಜು ಮಾತನಾಡಿ, ಕೇವಲ ತರೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯೊಂದರಲ್ಲೆ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರ ಪ್ರತಿ ತಿಂಗಳು ಅಂದಾಜು 11 ಕೋಟಿ ರೂ. ಮಹಿಳೆಯರಿಗೆ ನೀಡುತ್ತಿದ್ದು ಅರ್ಹರೆಲ್ಲರೂ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಸುಜೀತಾ ಸಂತೋಷ್, ಗ್ರಾಪಂ ಸದಸ್ಯರು, ಪಿಡಿಒ ಬಿ.ಮಂಜನಾಯ್ಕ ಇತರರಿದ್ದರು.