

ಪಿರಿಯಾಪಟ್ಟಣ: ಹಕ್ಕು ಪತ್ರ ಪಡೆದಿರುವ ಮಹಿಳೆಯರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದು ಅಭಿವೃದ್ಧಿ ಹೊಂದುವಂತೆ ಶಾಸಕ ಕೆ. ಮಹದೇವ್ ತಿಳಿಸಿದರು.\
ತಾಲೂಕಿನ ಬೂದಿತಿಟ್ಟು ಗ್ರಾಮದಲ್ಲಿ ಬುಧವಾರ ಮನೆ ಸಕ್ರಮ ಹಕ್ಕು ಪತ್ರ ವಿತರಿಸಿ ಮಾತನಾಡಿ, ಹಲವು ವರ್ಷಗಳಿಂದ ಸರ್ಕಾರಿ ಗ್ರಾಮ ಠಾಣಾ, ಸರ್ಕಾರಿ ಕರಾಬು ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡಿದ್ದ ಬಡಜನರಿಗೆ ಸಕ್ರಮ ಮಾಡಿ ಹಕ್ಕುಪತ್ರ ನೀಡಿರುವುದರಿಂದ ಮನೆಗಳ ಕಾನೂನುಬದ್ಧ ವಾರಸುದಾರರಾಗಿರುವ ಬಡ ಜನರಿಗೆ ಸಾಲ ಸೌಲಭ್ಯ ಸೇರಿದಂತೆ ಇನ್ನಿತರ ಸವಲತ್ತು ಪಡೆಯಲು ಅನುಕೂಲವಾಗಲಿದೆ ಎಂದರು.
ನನ್ನ ಅವಧಿಯಲ್ಲಿ ತಾಲೂಕಿನಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ನೋಡಿ ಮತದಾರರು ನನ್ನ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಚೌತಿ ಗ್ರಾಪಂ ಉಪಾಧ್ಯಕ್ಷ ಲಕ್ಷ್ಮಣ್ ಪಟೇಲ್, ಸದಸ್ಯ ರವಿಚಂದ್ರ ಸೇರಿದಂತೆ ಜೆಡಿಎಸ್ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.