ಸರ್ಕಾರಿ-ಅನುದಾನಿತ ಶಾಲೆಗಳ ನಡುವೆ ತಾರತಮ್ಯ

mysore
Published on

ಮಕ್ಕಳು ಮತ್ತು ಶಿಕ್ಷಕರ ಅನುಪಾತದ ವಿಷಯದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ನಡುವೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರೂ ಆದ ಜ್ಯೋತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎ.ಎಸ್.ಚನ್ನಬಸಪ್ಪ ಆರೋಪಿಸಿದರು.

ಕಲಾಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಕುವೆಂಪುನಗರ ಜ್ಯೋತಿ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಅನುದಾನಿತ ಶಾಲೆಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರಿರಬೇಕು ಎನ್ನುವವರು ಸರ್ಕಾರಿ ಶಾಲೆಗಳಲ್ಲಿ ಐವರು ವಿದ್ಯಾರ್ಥಿಗಳಿದ್ದರೂ ಒಬ್ಬ ಶಿಕ್ಷಕರನ್ನು ಮುಂದುವರಿಸುತ್ತಾರೆ. ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಶಿಕ್ಷಕರ ಹುದ್ದೆಗಳನ್ನೇ ಬೇರೆಡೆಗೆ ಸ್ಥಳಾಂತರಿಸುತ್ತಾರೆ ಎಂದರು.

ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಇದು ಅವಕಾಶಗಳ ಯುಗ. ಚೆನ್ನಾಗಿ ಓದಿ, ವಿಶ್ವದ ಎಲ್ಲಿ ಬೇಕಾದರೂ ಉದ್ಯೋಗ ಪಡೆಯಬಹುದು ಎಂದು ಹೇಳಿದರು.

ಸಂಸ್ಥೆ ಅಧ್ಯಕ್ಷ ಡಾ.ಮುದ್ದುವೀರಪ್ಪ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಸುನಂದಮ್ಮ ಮರಿಬಸವಸ್ವಾಮಿ, ಎನ್.ಶೈಲೇಶ್‌ಕುಮಾರ್, ಎಸ್.ನಟರಾಜು, ಸುಧಾಕರ್, ಪ್ರಣಮ್ಯ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷೆ ಸವಿತಾ ಪಿ. ಪುಟ್ಟೇಗೌಡ, ಪಿಯು ಕಾಲೇಜು ಪ್ರಾಂಶುಪಾಲ ಡಾ.ಭರತ್‌ರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net