ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯುಷ್ ನಿರ್ಮಾಣವಾಗಲಿ

13 tnp prakasha 02
Published on

ತಿ.ನರಸೀಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯುಷ್ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ತಾಯೂರು ಪ್ರಕಾಶ್ ಒತ್ತಾಯಿಸಿದ್ದಾರೆ.

ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ 70 ಲಕ್ಷ ರೂ.ಬಿಡುಗಡೆ ಮಾಡಿದೆ. ಪುರಸಭೆ ಗುರುತು ಮಾಡಿರುವ ಜಾಗ ಪಟ್ಟಣದಿಂದ ದೂರವಿದ್ದು, ರೋಗಿಗಳಿಗೆ ತೊಂದರೆ ಎದುರಾಗಲಿದೆ. ಹೀಗಾಗಿ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆ ಆವರಣದಲ್ಲೇ ನಿರ್ಮಾಣಕ್ಕೆ ಆದ್ಯತೆ ನೀಡುವುದು ಸೂಕ್ತ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ತಾಪಂನ ಕೆಡಿಪಿ ಸಭೆಯಲ್ಲಿ ಶಾಸಕರಾದ ಯತೀಂದ್ರ ಹಾಗೂ ಅಶ್ವಿನ್ ಕುಮಾರ್ ಅವರು, ಪುರಸಭೆ ಗುರುತಿಸಿರುವ ಜಾಗದಲ್ಲೇ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡುವಂತೆ ಆಯುಷ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಹಿತ ದೃಷ್ಟಿ ಯಿಂದ ಶಾಕಸದ್ವಯರು ತಮ್ಮ ನಿಲುವನ್ನು ಬದಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net