ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

2525
Published on

ಚಿಕ್ಕೋಡಿ: ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್​ಎ್​ ಯೋಧ ಸೂರಜ್​ ಧೋಂಡಿರಾಮ ಸುತಾರ (30) ಅವರ ಅಂತ್ಯಕ್ರಿಯೆ ಬುಧವಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.

ಪಶ್ಚಿಮ ಬಂಗಾಳದ ಪಂಜಿ ಪಾಡಾ ಎಂಬಲ್ಲಿ ಜು. 18ರಂದು ಆಟೋದಿಂದ ಕೆಳಗೆ ಇಳಿದಾಗ ಮುಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಸಾವನ್ನಪ್ಪಿದ್ದರು. ಬುಧವಾರ ಬೆಳಗ್ಗೆ ದೆಹಲಿ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸೂರಜ್​ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಯಡೂರವಾಡಿಗೆ ತರಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಿತು.

ಮೆರವಣಿಗೆ ವೇಳೆ ಪುಷ್ಪನಮನ, ಮನೆ ಮನೆಯವರಿಂದ ಆರತಿ ಬೆಳಗಿ ಅಂತಿಮ ನಮನ ಸಲ್ಲಿಸಲಾಯಿತು. ಮೆರವಣಿಗೆಯಲ್ಲಿದ್ದ ಶಾಲಾ ಮಕ್ಕಳು ಘೋಷವಾಕ್ಯ ಮೊಳಗಿಸಿದರು. ಮೃತ ಯೋಧನ ಪಾರ್ಥಿವ ಶರೀರಕ್ಕೆ ಚಿಕ್ಕೋಡಿ ತಾಲೂಕು ಆಡಳಿತ ಹಾಗೂ ಸ್ಥಳಿಯ ಜನಪ್ರತಿನಿಧಿಗಳು, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಅಂತಿಮ ಗೌರವ ಸಲ್ಲಿಸಿದರು.

ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ, ಚರಮೂರ್ತಿಮಠದ ಸಂಪಾದನ ಸ್ವಾಮೀಜಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಗಣೇಶ ಹುಕ್ಕೇರಿ, ಮಾಜಿ ಎಂಎಲ್​ಸಿ ಮಹಾಂತೇಶ ಕವಟಗಿಮಠ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net