ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

25NGD1
ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಎನ್.ಮಂಜುನಾಥ್ ವಿತರಿಸಿದರು.
Published on

ನಂಜನಗೂಡು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೂ ಅನುಕೂಲ ಮತ್ತು ಸೌಲಭ್ಯಗಳು ದೊರಕಬೇಕೆಂಬ ನಿಟ್ಟಿನಲ್ಲಿ ಸಮವಸ್ತ್ರಗಳನ್ನು ನೀಡಲಾಗಿದೆ ಎಂದು ದಾನಿ ಎನ್.ಮಂಜುನಾಥ್ (ನೆಸ್ಲೆ) ತಿಳಿಸಿದರು.

ತಾಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 80 ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು. ಖಾಸಗಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯ ಸರ್ಕಾರಿ ಶಾಲೆಯಲ್ಲೂ ದೊರೆಯುವಂತಾಗಬೇಕು. ಆಗ ಮಾತ್ರ ಮಕ್ಕಳು ಸಾಧನೆ ಮಾಡಲು ಸಾಧ್ಯ ಎಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಗ್ರಾ.ಪಂ. ಸದಸ್ಯರು, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net